Thursday, August 18, 2022

Latest Posts

ಶಿವಮೊಗ್ಗ ಜಿಲ್ಲೆಯಲ್ಲಿ 1067 ಜನರಿಗೆ ಕೊರೋನಾ ಸೋಂಕು ದೃಢ, 26 ಸಾವು  

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸ ದಿಗಂತ ವರದಿ, ಶಿವಮೊಗ್ಗ:

ಬುಧವಾರ ಕೊರೋನಾ ಸೋಂಕಿತ 26 ಜನರು ಮೃತಪಟ್ಟಿದ್ದು, ಸಾವಿನ ಸಂಖ್ಯೆ ಒಂದೇ ದಿನಕ್ಕೆ ಒಂದೂವರೆ ಪಟ್ಟಿಗಿಂತ ಹೆಚ್ಚಾಗಿದ್ದು, ಇನ್ನಷ್ಟು ಆತಂಕ ಸೃಷ್ಟಿಸಿದೆ.
ಮಂಗಳವಾರ 10 ಜನ ಸೋಂಕಿತರು ಮೃತಪಟ್ಟಿದ್ದರು. ಇದರಿಂದಾಗಿ ಸಾವಿನ ಪ್ರಮಾಣ ಕಡಿಮೆಯಾಗಬಹುದೆಂಬ ಆಶಾಭಾವನೆ ಎಲ್ಲರಲ್ಲಿತ್ತು. ಆದರೆ ಸೋಕಿತರ ಸಂಖ್ಯೆ 1596 ಕ್ಕೆ ಏರಿಕೆಯಾಗಿತ್ತು. ಬುಧವಾರದ ಸಾವಿನ ಕೇಕೆ ದುಸ್ವಪ್ನವಾಗಿ ಮಾರ್ಪಟ್ಟಿದ್ದು, ಮೃತರ ಸಂಖ್ಯೆ 597 ಕ್ಕೆ ಏರಿಕೆಯಾಗಿದೆ.
1067 ಜನರಲ್ಲಿ ಕೊರೋನಾ ಸೋಂಕು ದೃಢಪಟ್ಟಿದೆ. ಗುಣಮುಖರಾದ 597 ಜನರನ್ನು ಬಿಡುಗಡೆ ಮಾಡಲಾಗಿದೆ.
ಶಿವಮೊಗ್ಗದಲ್ಲಿ 333, ಭದ್ರಾವತಿ 177, ಶಿಕಾರಿಪುರ 81, ತೀರ್ಥಹಳ್ಳಿ 78, ಸೊರಬ 107, ಸಾಗರ 183, ಹೊಸನಗರ 58 ಹಾಗೂ ಹೊರ ಜಿಲ್ಲೆಯ 39 ಪ್ರಕರಣ ದಾಖಲಾಗಿದ್ದು, ಜಿಲ್ಲೆಯಲ್ಲಿ 6514 ಸಕ್ರಿಯ ಪ್ರಕರಣಗಳು ದಾಖಲಾಗಿವೆ. 2201 ಜನರ ಗಂಟಲು ದ್ರವ ಪರೀಕ್ಷೆಗೆ ಒಳಪಡಿಸಲಾಗಿದೆ. ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ 566 ಜನ, ಖಾಸಗಿ ಆಸ್ಪತ್ರೆಯಲ್ಲಿ 492 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೋವಿಡ್ ಕೇರ್ ಸೆಂಟರ್ ನಲ್ಲಿ 236 ಜನರಿದ್ದು, ಡಿಸಿಎಚ್ ಸಿಯಲ್ಲಿ 337 ಜನ ಹಾಗೂ
4154 ಜನ ಹೋಂ ಕ್ವಾರಂಟೈನ್ ನಲ್ಲಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!