ಶ್ರೀನಗರದಲ್ಲಿ ಓರ್ವ ಉಗ್ರನನ್ನು ಹೊಡೆದುರುಳಿಸಿದ ಭದ್ರತಾ ಸಿಬ್ಬಂದಿ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ಶ್ರೀನಗರದಲ್ಲಿ ನಡೆದ ಉಗ್ರರು ಮತ್ತು ಭದ್ರತಾ ಸಿಬ್ಬಂದಿ ಮಧ್ಯೆ ನಡೆದ ಗುಂಡಿನಚಕಮಕಿಯಲ್ಲಿ ಓರ್ವ ಭಯೋತ್ಪಾದಕನನ್ನು ಯೋಧರು ಹೊಡೆದುರುಳಿಸಿದ್ದಾರೆ.
ಶ್ರೀನಗರದ ಕ್ರೀಸ್ಬಲ್ ಪಾಪ್​ಪೋರಾ ಸಂಗಮ್ ಪ್ರದೇಶದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಎಲ್ಇಟಿ ಉಗ್ರಗಾಮಿ ಸಂಘಟನೆಗೆ ಸೇರಿದ್ದ ಆದಿಲ್ ಪರ್ಯೆ ಎಂಬ ಉಗ್ರನನ್ನು ಹೊಡೆದುರುಳಿಸಿರುವುದಾಗಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ತಿಳಿಸಿದ್ದಾರೆ.
ಈ ಬಗ್ಗೆ ಟ್ವೀಟ್​ ಮಾಡಿರುವ ಪೊಲೀಸರು, ಶ್ರೀನಗರದಲ್ಲಿ ಇತ್ತೀಚೆಗೆ ನಡೆದ ದಾಳಿಯಲ್ಲಿ ಗುಲಾಂ ಹಸನ್ ದಾರ್ ಮತ್ತು ಸೈಫುಲ್ಲಾ ಖಾದ್ರಿ ಎಂಬ ಇಬ್ಬರು ಪೊಲೀಸರ ಹತ್ಯೆಯಲ್ಲಿ ಹತನಾದ ಉಗ್ರಗಾಮಿ ಆದಿಲ್​ ಭಾಗಿಯಾಗಿದ್ದ ಎಂದು ಪೊಲೀಸರು ಹೇಳಿದ್ದಾರೆ.

ಸ್ಫೋಟದಲ್ಲಿ ಇಬ್ಬರು ಸೈನಿಕರಿಗೆ ಗಾಯ
ಪೂಂಚ್‌ನ ಗಡಿ ನಿಯಂತ್ರಣ ರೇಖೆಯ (ಎಲ್‌ಒಸಿ) ಬಳಿ ನಡೆದ ಬೂಬಿ ಟ್ರ್ಯಾಪ್​ ಸ್ಫೋಟದಲ್ಲಿ ಇಬ್ಬರು ಸೇನಾ ಸಿಬ್ಬಂದಿ ಗಾಯಗೊಂಡಿದ್ದಾರೆ. ಪೂಂಚ್ ಜಿಲ್ಲೆಯ ಮೆಂಧರ್‌ನ ಬಾಲಾಕೋಟ್ ಸೆಕ್ಟರ್‌ನಲ್ಲಿ ಸೇನಾ ತಂಡ ಸುತ್ತಮುತ್ತಲಿನ ಪ್ರದೇಶದಲ್ಲಿ ಹುಲ್ಲು ತೆರವುಗೊಳಿಸುತ್ತಿದ್ದಾಗ ಬೂಬಿ ಟ್ರ್ಯಾಪ್​ ಸ್ಫೋಟ ಸಂಭವಿಸಿದೆ.
19ನೇ ಬೆಟಾಲಿಯನ್​ನ ಯೋಧ ಮತ್ತು ಹವಾಲ್ದಾರ್ ಸ್ಫೋಟದಿಂದ ಗಾಯಗೊಂಡಿದ್ದಾರೆ. ತಕ್ಷಣವೇ ಇಬ್ಬರನ್ನು ಹೆಲಿಕಾಪ್ಟರ್ ಮೂಲಕ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!