ತಮಿಳುನಾಡಿನಲ್ಲಿ ಕಳ್ಳಭಟ್ಟಿ ಕುಡಿದು ಮೃತಪಟ್ಟವರ ಸಂಖ್ಯೆ 29ಕ್ಕೆ ಏರಿಕೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ತಮಿಳುನಾಡಿನ ಕಲ್ಲಕುರಿಚಿಯಲ್ಲಿ ಕಳ್ಳಭಟ್ಟಿ ಸೇವನೆ ಮಾಡಿ ಮೃತಪಟ್ಟವರ ಸಂಖ್ಯೆ 29ಕ್ಕೆ ಏರಿಕೆಯಾಗಿದೆ. ಕಳ್ಳಭಟ್ಟಿ ಕುಡಿದ ಪರಿಣಾಮ 60ಕ್ಕೂ ಅಧಿಕ ಮಂದಿ ಅಸ್ವಸ್ಥರಾಗಿದ್ದು, ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಸಿಬಿ ಸಿಐಡಿ ತನಿಖೆಗೆ ಆದೇಶಿಸಿದ್ದಾರೆ.

ಕಲ್ಲಕುರಿಚಿ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ಅಸ್ವಸ್ಥರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಅಕ್ರಮ ಮದ್ಯ ಪ್ಯಾಕೆಟ್ ‘ಅರಕ್’ ಸೇವಿಸಿ ಜನರು ಅಸ್ವಸ್ಥಗೊಂಡಿದ್ದರು ಎಂದು ಮೂಲಗಳು ತಿಳಿಸಿವೆ. ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರು ಈ ಪ್ರಕರಣದಲ್ಲಿ ಸಿಐಡಿ ತನಿಖೆಗೆ ಆದೇಶಿಸಿದ್ದಾರೆ.

ಕಲ್ಲಕುರಿಚಿಯಲ್ಲಿ ಕಲಬೆರಕೆ ಮದ್ಯ ಸೇವಿಸಿ ಸಾವನ್ನಪ್ಪಿರುವ ಸುದ್ದಿ ಕೇಳಿ ನನಗೆ ಆಘಾತವಾಗಿದೆ ಮತ್ತು ದುಃಖವಾಗಿದೆ. ಈ ಪ್ರಕರಣದಲ್ಲಿ ಅಪರಾಧದಲ್ಲಿ ಭಾಗಿಯಾದವರನ್ನು ಬಂಧಿಸಲಾಗಿದೆ. ಇದನ್ನು ತಡೆಯಲು ವಿಫಲರಾದ ಅಧಿಕಾರಿಗಳ ವಿರುದ್ಧವೂ ಕ್ರಮ ಕೈಗೊಳ್ಳಲಾಗಿದೆ. ತಕ್ಷಣವೇ ಸಮಾಜವನ್ನು ಹಾಳುಗೆಡವುವ ಇಂತಹ ಕೃತ್ಯಗಳಲ್ಲಿ ಭಾಗಿಯಾದವರ ಬಗ್ಗೆ ಸಾರ್ವಜನಿಕರು ಮಾಹಿತಿ ನೀಡಿದರೆ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಸ್ಟಾಲಿನ್​ ಎಕ್ಸ್​ನಲ್ಲಿ ಪೋಸ್ಟ್​ ಮಾಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!