Thursday, July 7, 2022

Latest Posts

ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಕೀಳು ಮಟ್ಟದ ಪ್ರಚಾರ: ಎಚ್.ಡಿ. ಕುಮಾರಸ್ವಾಮಿ ಟೀಕೆ

ಹೊಸ ದಿಗಂತ ವರದಿ,  ವಿಜಯಪುರ:

ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಕೀಳು ಮಟ್ಟದ ಪ್ರಚಾರ ಮಾಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಟೀಕಿಸಿದರು.
ಜಿಲ್ಲೆಯ ಸಿಂದಗಿಯಲ್ಲಿ ಮಾತನಾಡಿದ ಅವರು, ನಮ್ಮ ಪಕ್ಷದ ಅಭ್ಯರ್ಥಿಯನ್ನಾಗಿ ಯಾರನ್ನು ಕಣಕ್ಕಿಳಿಸಬೇಕೆಂಬುದು ನಮಗೆ ಗೊತ್ತಿದೆ. ಅದನ್ನು ಕಾಂಗ್ರೆಸ್‌ನಿಂದ ಕೇಳಿ ತಿಳಿದುಕೊಳ್ಳಬೇಕಿಲ್ಲ ಎಂದರು.
ಕಾಂಗ್ರೆಸ್‌ನ ಈ ನಡೆಯೇ ಬಿಜೆಪಿ ಅಧಿಕಾರಕ್ಕೆ ಬರಲು ಕಾರಣವಾಗಿದೆ. ಜೆಡಿಎಸ್ ಎಂದೂ ಬಿ ಟೀಮ್ ಆಗಲ್ಲ. ಬಿಜೆಪಿ ಜೊತೆ ಯಾವುದೇ ಆಂತರಿಕ ಹೊಂದಾಣಿಕೆ ಮಾಡಿಕೊಂಡಿಲ್ಲ. ಹಾಗೆ ಮಾಡಿಕೊಂಡಿದ್ದರೆ ಆರ್‌ಎಸ್‌ಎಸ್ ಬಗ್ಗೆ ಮಾತನಾಡುತ್ತಿರಲಿಲ್ಲ ಎಂದರು.
ಇನ್ನು ನಾಜಿಯಾ ವಿದ್ಯಾವಂತ ಮಹಿಳೆ. ಅಕ್ಷರವೇ ಗೊತ್ತಿರದ ಹೆಬ್ಬೆಟ್ಟಿನ ಮಹಿಳೆಗೆ ಟಿಕೆಟ್ ನೀಡಿಲ್ಲ ಎಂದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss