Tuesday, August 9, 2022

Latest Posts

ಅಶ್ಲೀಲ ಸಿನಿಮಾ ಪ್ರಕರಣದಲ್ಲಿ ನನ್ನನ್ನು ಬಲಿಪಶುವನ್ನಾಗಿ ಮಾಡಲಾಗಿದೆ: ಜಾಮೀನಿಗಾಗಿ ಪರದಾಡುತ್ತಿರುವ ರಾಜ್​ ಕುಂದ್ರಾ!

ಹೊಸದಿಗಂತ ಆನ್ ಲೈನ್ ಡೆಸ್ಕ್:

ಅಶ್ಲೀಲ ಸಿನಿಮಾ ನಿರ್ಮಾಣ ದಂಧೆಯಲ್ಲಿ ಬಂಧನವಾಗಿರುವ ಉದ್ಯಮಿ ರಾಜ್​ ಕುಂದ್ರಾ ಈಗಾಗಲೇ ಜಾಮೀನು ಕೋರಿ ಮುಂಬೈ ಕೋರ್ಟ್​ವೊಂದಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಅಶ್ಲೀಲ ಸಿನಿಮಾ ದಂಧೆ ಸಂಬಂಧ ಪ್ರಕರಣದಲ್ಲಿ ನನ್ನನ್ನು ಬಲಿಪಶುವನ್ನಾಗಿ ಮಾಡಲಾಗಿದೆ ಎಂದು ಹೇಳಿದ್ದಾರೆ. ಈ ಕೇಸ್​​ನಲ್ಲಿ ನನ್ನ ವಿರುದ್ಧ ಸಲ್ಲಿಸಲಾದ ಚಾರ್ಜ್​ಶೀಟ್​​ನಲ್ಲಿ ನಾನು ಆರೋಪಿ ಎಂಬುದಕ್ಕೆ ಒಂದೇ ಒಂದು ಸ್ಪಷ್ಟ ಸಾಕ್ಷ್ಯಾಧಾರವೂ ಇಲ್ಲ ಎಂದು ರಾಜ್​ ಕುಂದ್ರಾ ಪ್ರತಿಪಾದಿಸಿದ್ದಾರೆ.
ಅಶ್ಲೀಲ ಚಿತ್ರ ನಿರ್ಮಾಣ ದಂಧೆ ನಡೆಸುತ್ತಿದ್ದಾರೆ ಎಂಬ ಆರೋಪದಡಿ ಉದ್ಯಮಿ ರಾಜ್​ ಕುಂದ್ರಾ ಸೇರಿ ನಾಲ್ವರನ್ನು ಮುಂಬೈ ಪೊಲೀಸರು ಜುಲೈ 19ರಂದು ಬಂಧಿಸಿದ್ದಾರೆ. ಸದ್ಯ ಪ್ರಕರಣವನ್ನು ಮುಂಬೈ ಕ್ರೈಂ ಬ್ರ್ಯಾಂಚ್​ ತನಿಖೆ ನಡೆಸುತ್ತಿದೆ. ಇದೀಗ ರಾಜ್​ಕುಂದ್ರಾ ತಮ್ಮ ವಕೀಲರಾದ ಪ್ರಶಾಂತ್ ಪಾಟೀಲ್​ ಮೂಲಕ ಮುಂಬೈ ಕೋರ್ಟ್​ಗೆ ಜಾಮೀನು ಅರ್ಜಿ ಸಲ್ಲಿಸಿದ್ದಾರೆ. ಸದ್ಯ ಅರ್ಜಿಯ ವಿಚಾರಣೆಯನ್ನು ಸೋಮವಾರಕ್ಕೆ ಕೋರ್ಟ್​ ಮುಂದೂಡಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss