ಹೊಸದಿಗಂತ ಡಿಜಿಟಲ್ ಡೆಸ್ಕ್:
ವಾಣಿಜ್ಯ ನಗರಿ ಮುಂಬೈನಲ್ಲಿ ಭಾರೀ ಮಳೆಯಾಗುತ್ತಿದ್ದು, ಬಿರುಗಾಳಿ ಮಳೆಗೆ ಜನರು ಹೈರಾಣಾಗಿದ್ದಾರೆ.
ಬಿರುಗಾಳಿ ಮಳೆಯಿಂದಾಗಿ ಮರ ಬಿದ್ದು ಇಬ್ಬರು ಮೃತಪಟ್ಟಿದ್ದು, ಹಲವರಿಗೆ ಗಾಯಗಳಾಗಿವೆ. ಭಾರತೀಯ ಹವಾಮಾನ ಇಲಾಖೆಯು ಆರೆಂಜ್ ಅಲರ್ಟ್ ಘೋಷಿಸಿದ್ದು, ಮಹರಾಷ್ಟ್ರದ ಆರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆ ಇದೆ.
ಮುಂಬೈ ಹಲವು ಪ್ರದೇಶಗಳು ಮಳೆಯಿಂದ ಜಲಾವೃತವಾಗಿದ್ದು, ಅಂಧೇರಿ ಸುರಂಗಮಾರ್ಗವನ್ನು ಬಂದ್ ಮಾಡಲಾಗಿದೆ. ಪ್ರತ್ಯೇಕ ಪ್ರಕರಣಗಳಲ್ಲಿ ಮರ ಬಿದ್ದು, ಇಬ್ಬರು ಮೃತಪಟ್ಟಿದ್ದಾರೆ.