ಹೊಸ ದಿಗಂತ ವರದಿ ಮೈಸೂರು:
ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ 18 ಸ್ಥಾನಗಳನ್ನು ಗೆಲ್ಲಲಿದೆ ಎಂದು ಪಕ್ಷದ ರಾಜ್ಯ ವಕ್ತಾರ ಎಂ.ಜಿ.ಮಹೇಶ್ ಹೇಳಿದರು. ಭಾನುವಾರ ನಗರದ ರಾಜೇಂದ್ರ ಭವನದಲ್ಲಿ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಬಿಜೆಪಿ ಜನ ಸೇವೆ ಕಾರ್ಯಕ್ರಮಗಳ ಮೂಲಕ ಜನರನ್ನು ತಲುಪಿದೆ. ಜಲ ಜೀವನ್ ಮಿಷನ್ ಯೋಜನೆ ಯಡಿ ಕೇಂದ್ರ ಸರ್ಕಾರ ಪ್ರತಿಯೊಂದು ಮನೆಗೆ ಕುಡಿಯುವ ನೀರು ಪೂರೈಕೆ ಮಾಡಲು ಕ್ರಮವಹಿಸಿದೆ. ಪ್ರಧಾನಿ ನರೇಂದ್ರ ಮೋದಿಯವರು ದೇಶದಲ್ಲಿ ರುವ ಸಮಾಜದ ಕಟ್ಟ ಕಡೆಯ ವ್ಯಕ್ತಿ ಹಸಿವು, ರೋಗದಿಂದ ಬಳಲಬಾರದೆಂದು ಹಲವಾರು ಯೋಜನೆಯನ್ನು ಜಾರಿಗೆ ತಂದಿದೆ. ಗ್ರಾಮೀಣ ಪ್ರದೇಶಗಳ ವಿಕಾಸಕ್ಕೆ ಹೆಚ್ಚು ಒತ್ತು ನೀಡಿದೆ. ಹಳ್ಳಿ, ಹಳ್ಳಿಗಳಲ್ಲಿ ಆತ್ಮನಿರ್ಭಾರ ಜಾರಿ ಮಾಡಲಾಗುತ್ತಿದೆ.ಜನರು ಬಿಜೆಪಿ ಗೆ ಹೆಚ್ಚಿನ ಬೆಂಬಲ ನೀಡುತ್ತಿದ್ದಾರೆ. ಹಾಗಾಗಿ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅತಿಹೆಚ್ಚು ಸ್ಥಾನಗಳಲ್ಲಿ ಗೆಲ್ಲುವ ಮೂಲಕ ಹೊಸ ಇತಿಹಾಸವನ್ನು ಬರೆಯಲಿದೆ ಎಂದು ತಿಳಿಸಿದರು.