‘ನಕಲಿ’ ನೋಟುಗಳಲ್ಲಿ ಗಾಂಧೀಜಿ ಬದಲಿಗೆ ಇತ್ತು ಬಾಲಿವುಡ್‌ ನಟನ ಫೋಟೋ!

ಹೊಸದಿಗಂತ ಡಿಜಿಟಲ್ ಡೆಸ್ಕ್: 

ಗುಜರಾತ್​ನ ಅಹ್ಮದಾಬಾದ್ ಪೊಲೀಸರು 1.6 ಕೋಟಿ ರೂಪಾಯಿಯ ಫೇಕ್ ಕರೆನ್ಸಿ ನೋಟುಗಳನ್ನು ವಶಕ್ಕೆ ಪಡೆದಿದ್ದಾರೆ.

ಆದ್ರೆ ಈ 500 ರೂ. ಮುಖಬೆಲೆಯ ನಕಲಿ ನೋಟುಗಳಲ್ಲಿ ಗಾಂಧೀಜಿ ಬದಲಿಗೆ ಬಾಲಿವುಡ್‌ ನಟ ಅನುಪಮ್‌ ಖೇರ್‌ ಅವರ ಚಿತ್ರ ಬಳಸಿರುವುದು ಕಂಡುಬಂದಿದೆ.

ರಿಸರ್ವ್​ ಬ್ಯಾಂಕ್ ಆಫ್ ಇಂಡಿಯಾ ಬದಲು ರಿಸೋಲ್ ಬ್ಯಾಂಕ್ ಆಫ್​ ಇಂಡಿಯಾದ ಎಂದು ಮುದ್ರಿಸಲಾಗಿದೆ. ಈ ಖೋಟಾ ನೋಟುಗಳ ವಿಡಿಯೋ ಸದ್ಯ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ. ಅದನ್ನು ಖುದ್ದು ಅನುಪಮ್ ಖೇರ್ ಕೂಡ ನೋಡಿ ಆಶ್ಚರ್ಯ ವ್ಯಕ್ತಪಡಿಸಿದ್ದಾರೆ. ತಮ್ಮ ಎಕ್ಸ್ ಖಾತೆಯಲ್ಲಿ ವಿಡಿಯೋ ಹಂಚಿಕೊಂಡಿರುವ ಅನುಪಮ್ ಖೇರ್​. ನೋಡಿ ಸ್ವಾಮಿ ಮಾತಾಡಿ, ಐನೂರು ರೂಪಾಯಿ ನೋಟುಗಳಲ್ಲಿ ಮಹಾತ್ಮಾ ಗಾಂಧಿ ಫೋಟೋ ಬದಲು ನನ್ನ ಫೋಟೋ, ಏನ್ ಬೇಕಾದ್ರೂ ಆಗುತ್ತೆ ಇಲ್ಲಿ ಎಂದು ಬರೆದುಕೊಂಡಿದ್ದಾರೆ.

https://x.com/AnupamPKher/status/1840444907678204100?ref_src=twsrc%5Etfw%7Ctwcamp%5Etweetembed%7Ctwterm%5E1840444907678204100%7Ctwgr%5Ef7da469a5f94507715e98d34b0716ce2ff86e8de%7Ctwcon%5Es1_&ref_url=https%3A%2F%2Fpublictv.in%2Fahmedabad-man-duped-with-fake-notes-featuring-anupam-khers-photo%2F

ಈ ಖೋಟಾ ನೋಟುಗಳನ್ನು ಚಿನ್ನದ ಅಂಗಡಿ ಮಾಲೀಕ ಮೆಹೂಲ್​ ಠಾಕೂರ್​ರಿಂದ ಈ ಒಂದು ನೋಟುಗಳನ್ನು ರಿಕವರಿ ಮಾಡಲಾಗಿದ್ದು. ಅನಾಮಿಕನ ಮೇಲೆ ಪ್ರಕರಣ ದಾಖಲಾಗಿದೆ.

ಸೆ.24 ರಂದು ನವರಂಗಪುರ ಪೊಲೀಸ್ ಠಾಣೆಯಲ್ಲಿ ಬುಲಿಯನ್ ವ್ಯಾಪಾರಿ ಮೆಹುಲ್ ಠಕ್ಕರ್ ದೂರು ದಾಖಲಿಸಿದ್ದರು. 1.6 ಕೋಟಿ ರೂ. ಮೌಲ್ಯದ 2,100 ಗ್ರಾಂ ಚಿನ್ನವನ್ನು ಒಳಗೊಂಡ ಡೀಲ್‌ಗಾಗಿ ಶಂಕಿತರು ತಮ್ಮ ಉದ್ಯೋಗಿಯೊಬ್ಬರನ್ನು ಸಂಪರ್ಕಿಸಿದ್ದರು. ಉಳಿದ 30 ಲಕ್ಷವನ್ನು ಮರುದಿನ ಪಾವತಿಸುವುದಾಗಿ ಭರವಸೆ ನೀಡಿ, 1.3 ಕೋಟಿ ನಗದು ನೀಡಿದ್ದಾರೆ. ಆದರೆ, ಚಿನ್ನವನ್ನು ಹಸ್ತಾಂತರಿಸಿದ ನಂತರ ಅವರು ಎಸ್ಕೇಪ್‌ ಆದರು. ಎಲ್ಲಾ ನೋಟುಗಳನ್ನು ಗಮನಿಸಿದಾಗ ನಕಲಿ ಎಂದು ತಿಳಿಯಿತು.

- Advertisement - Skool Shine
Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!