Wednesday, August 17, 2022

Latest Posts

ತೋಟದಲ್ಲಿ ಗಾಂಜಾ ಬೆಳೆದ ವ್ಯಕ್ತಿಯ ಬಂಧನ

ಹೊಸ ದಿಗಂತ ವರದಿ, ಮಡಿಕೇರಿ:

ತೋಟದಲ್ಲಿ ಗಾಂಜಾ ಗಿಡ ಬೆಳೆದಿದ್ದ ವ್ಯಕ್ತಿಯನ್ನು ಮಡಿಕೇರಿ ಗ್ರಾಮಾಂತರ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಮಡಿಕೇರಿ ತಾಲೂಕಿನ ಹೊಸ್ಕೇರಿಯ ಕರ್ಣಯ್ಯನ ಚಂದ್ರಶೇಖರ್ ಬಂಧಿತ ಆರೋಪಿ.
ತನ್ನ ಮನೆಯ ಮುಂದಿನ ತೋಟದಲ್ಲಿ ಅಕ್ರಮವಾಗಿ ಗಾಂಜಾ ಬೆಳೆದಿರುವ ಬಗ್ಗೆ ಖಚಿತ ಮಾಹಿತಿ ಪಡೆದುಕೊಂಡ ಪೊಲೀಸರು ತೋಟದಲ್ಲಿ ಬೆಳೆದಿದ್ದ 2 ಗಾಂಜಾ ಗಿಡ ಪತ್ತೆ ಹಚ್ಚಿ ವಶಪಡಿಸಿಕೊಂಡಿದ್ದು, ಆರೋಪಿಯನ್ನು ಬಂಧಿಸಿದ್ದಾರೆ.
ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ರವಿ ಕಿರಣ್, ಸಬ್‌ಇನ್ಸ್ಪೆಕ್ಟರ್ ಸದಾಶಿವ ಮತ್ತು ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!