Friday, July 1, 2022

Latest Posts

ಉಡುಪಿಯಲ್ಲಿ ಹೆಚ್ಚುತ್ತಿರುವ ಕೊರೋನಾ: ಕಠಿಣ ಲಾಕ್‌ಡೌನ್ ಜಾರಿಗೆ ಸಂಸದೆ ಶೋಭಾ ಒತ್ತಾಯ

ಹೊಸ ದಿಗಂತ ವರದಿ, ಉಡುಪಿ:

ಕೋವಿಡ್ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ, ಉಡುಪಿ ಜಿಲ್ಲೆಯಲ್ಲೂ ಪ್ರಕರಣಗಳು ಜಾಸ್ತಿಯಾಗಿವೆ. ಜನತಾ ಕರ್ಫ್ಯೂನಿಂದ ನಿಯಂತ್ರಣ ಕಷ್ಟ ಎಂದೆನಿಸುತ್ತಿದೆ. ಆದ್ದರಿಂದ ಕಳೆದ ಬಾರಿಯಂತೆ ಗಂಭೀರವಾಗಿ ಲಾಕ್‌ಡೌನ್ ಮಾಡಬೇಕು, ಅವಶ್ಯ ವಸ್ತುಗಳಿಗೆ ಮಾತ್ರ ಅವಕಾಶ ನೀಡಬೇಕು ಎಂದು ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.
ಗುರುವಾರ ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನ ಈಗಿನಂತೆ ಹೊರಗೆ ಓಡಾಡಿದರೆ ಕೋವಿಡ್ ನಿಯಂತ್ರಣ ಸಾಧ್ಯವಿಲ್ಲ. ಮದುವೆ, ದೇವಸ್ಥಾನ, ಕಾರ್ಯಕ್ರಮ, ಭೂತಾರಾಧನೆ ಎಲ್ಲವೂ ನಡೆಯುತ್ತಿದೆ. ಜನ ಹೆಚ್ಚು ಬೆರೆಯುವುದರಿಂದ ರೋಗ ಹರಡುತ್ತದೆ. ಜನರು ಮನೆಯಿಂದ ಹೊರಬಂದರೆ ಚೈನ್ ಲಿಂಕ್ ಮುರಿಯುವುದು ಅಸಾಧ್ಯ, 15 ದಿನಗಳ ಕಟ್ಟುನಿಟ್ಟಿನ ಕ್ರಮ ಅನಿವಾರ್ಯ ಎಂದರು.
ಉಡುಪಿ ಜಿಲ್ಲೆಗೆ ಈಗಲೂ ಜನರು ಮುಂಬೈ ಬೆಂಗಳೂರಿನಿಂದ ಬರುತ್ತಿದ್ದಾರೆ. ಹೊರ ಜಿಲ್ಲೆಗಳಿಂದ ಬಂದವರಿಗೆ ಆದ್ಯತೆ ಮೇಲೆ ಕೋವಿಡ್ ಪರೀಕ್ಷೆ ಮಾಡಿಸಬೇಕು. ಇವತ್ತಿಂದ ರ್ಯಾಪಿಡ್ ಟೆಸ್ಟ್ ಆರಂಭಿಸಲು ಸೂಚನೆ ನೀಡಿದ್ದೇನೆ. ಜೊತೆಗೆ ಹೋಂ ಕ್ವಾರಂಟೈನ್ ಕೂಡ ಕಡ್ಡಾಯ ಮಾಡಬೇಕು ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss