ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………………..
ಹೊಸ ದಿಗಂತ ವರದಿ, ಹಾಸನ:
ಹಾಸನ ಜಿಲ್ಲೆಯಲ್ಲಿ ಕೊರೋನಾ ಮರಣಮೃದಂಗ ಬಾರಿಸಿದ್ದು,ಶುಕ್ರವಾರ ಒಂದೇ ದಿನ ಹದಿನೆಂಟು ಮಂದಿ ಸಾವನ್ನಪ್ಪಿದ್ದಾರೆ.
ಕೋವಿಡ್ ಸಾವಿನ ಸಂಖ್ಯೆ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಕಳೆದ ಹತ್ತು ದಿನದಲ್ಲಿ 78 ಮಂದಿ ಡೆಡ್ಲಿ ಕೊರೋನಾಗೆ ಬಲಿಯಾಗಿದ್ದಾರೆ.
ಜಿಲ್ಲೆಯಲ್ಲಿ ಹೊಸದಾಗಿ 667 ಕೊರೋನಾ ಪಾಸಿಟಿವ್ ಕೇಸ್ ಳು ಪತ್ತೆಯಾಗಿದ್ದು, ಜಿಲ್ಲೆಯಲ್ಲಿ 39192 ಕ್ಕೆ ಸೋಂಕಿತರ ಸಂಖ್ಯೆ ಏರಿಕೆಯಾಗಿದೆ.
6365 ಸಕ್ರಿಯ ಸೋಂಕಿತರಿಗೆ ವಿವಿಧ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು,ಐಸಿಯುನಲ್ಲಿ 67 ಮಂದಿ ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿದೆ.
ಶುಕ್ರವಾರ 408 ಮಂದಿ ಡಿಸ್ಚಾರ್ಜ್ ಆಗಿದ್ದು,ಇದುವರೆಗೂ 32246 ಮಂದಿ ಡಿಸ್ಚಾರ್ಜ್ ಆಗಿದ್ದು, ಕೊರೊನಾದಿಂದ 581 ಜನ ಸಾವನ್ನಪ್ಪಿದ್ದಾರೆ.