Thursday, July 7, 2022

Latest Posts

ಆಸ್ಪತ್ರೆಯಲ್ಲೇ ಅತ್ಯಾಚಾರ ಯತ್ನಕ್ಕೊಳಗಾದ ಮಹಿಳಾ ರೋಗಿ ಸಾವು

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸ ದಿಗಂತ ವರದಿ, ಕಲಬುರಗಿ:

ಜಿಮ್ಸ್‌ ಆಸ್ಪತ್ರೆಯಲ್ಲಿ ಕೋವಿಡ್‌ಗೆ ಚಿಕಿತ್ಸೆ ಪಡೆಯುತ್ತಿದ್ದ ಸಂದರ್ಭದಲ್ಲೇ ಖಾಸಗಿ ಆಂಬುಲೆನ್ಸ್‌ ಚಾಲಕನಿಂದ ಅತ್ಯಾಚಾರ ಯತ್ನಕ್ಕೊಳಗಾಗಿದ್ದ 25 ವರ್ಷದ ಮಹಿಳೆ ಬುಧವಾರ ಸಾವಿಗೀಡಾಗಿದ್ದಾರೆ.
ಜೂನ್ 8ರಂದು ರಾತ್ರಿ ಆಂಬುಲೆನ್ಸ್ ಚಾಲಕ, ನಗರದ ಫಿಲ್ಟರ್ ಬೆಡ್ ನಿವಾಸಿ ಪ್ರೇಮಕುಮಾರ ಅಲಿಯಾಸ್ ಪಿಂಟು (25) ಅತ್ಯಾಚಾರಕ್ಕೆ ಯತ್ನಿಸಿದ್ದ.
ಇದರಿಂದ ಎಚ್ಚರಗೊಂಡ ಮಹಿಳೆ ಜೋರಾಗಿ ಕೂಗಿಕೊಂಡಿದ್ದರಿಂದ ಸುತ್ತಮುತ್ತಲಿನ ಬೆಡ್‌ಗಳಲ್ಲಿದ್ದ ರೋಗಿಗಳು ಹಾಗೂ ಸಿಬ್ಬಂದಿ ಹಿಡಿಯಲು ಯತ್ನಿಸಿದ್ದರು. ಆಗ ತಪ್ಪಿಸಿಕೊಂಡಿದ್ದ.
ನಂತರ ಬ್ರಹ್ಮಪುರ ಠಾಣೆ ಪೊಲೀಸರು ವಶಕ್ಕೆ ಪಡೆದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss