ಹೊಸದಿಗಂತ ಆನ್ ಲೈನ್ ಡೆಸ್ಕ್:
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಪಟ್ರಮೆಯ ಬಳಿಯಲ್ಲಿ ಮರ ಕಡಿಯುತ್ತಿದ್ದ ವೇಳೆ ಅವಘಡವೊಂದು ಸಂಭವಿಸಿದ್ದು, ಮರ ಕಡಿಯುತ್ತಿರುವ ಸಂದರ್ಭದಲ್ಲಿ ಆಕಸ್ಮಿಕವಾಗಿ ಅಡಿಗೆ ಬಿದ್ದು ಮೂವರು ಯುವಕರು ಮೃತಪಟ್ಟಿದ್ದಾರೆ.
ಪಟ್ರಮೆ ಗ್ರಾಮದ ರಾಮಣ್ಣ ಕುಂಬಾರ ಎಂಬವರ ಪುತ್ರ ಪ್ರಶಾಂತ್ (21), ಸೇಸಪ್ಪ ಪೂಜಾರಿ ಅವರ ಮಗ ಸ್ವಸ್ತಿಕ್ (23) ಮತ್ತು ಉಪ್ಪಿನಂಗಡಿ ನಿವಾಸಿ ಗಣೇಶ್ (38) ಮೃತರು.
ಪಟ್ರಮೆ ಗ್ರಾಮದ ಅನಾರು ಸಮೀಪದ ಕಾಯಿಲ ಲೋಕಯ್ಯ ಗೌಡರಿಗೆ ಸೇರಿದ ಸ್ಥಳದಲ್ಲಿದ್ದ ದೂಪದ ಮರವೊಂದನ್ನು ಕಡಿದು ಉರುಳಿಸುವ ವೇಳೆ, ಈ ದುರ್ಘಟನೆ ನಡೆದಿದೆ. ಈ ಸಂಬಂಧ ಧರ್ಮಸ್ಥಳ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.