ಹೊಸದಿಗಂತ ಡಿಜಿಟಲ್ ಡೆಸ್ಕ್:
ದೆಹಲಿಯ ಜವಾಹರ್‌ಲಾಲ್ ನೆಹರೂ ವಿಶ್ವವಿದ್ಯಾಲಯದಲ್ಲಿ ಸ್ಟೂಡೆಂಟ್ ಯುನಿಯನ್ ಎಲೆಕ್ಷನ್ ನಡೆದಿದ್ದು, ಇದೀಗ ಫಲಿತಾಂಶ ಪ್ರಕಟವಾಗಿದೆ.
ಕಳೆದ ಹಲವು ಬಾರಿಯೂ ವಿವಿಯಲ್ಲಿ ವಿದ್ಯಾರ್ಥಿಗಳ ನಡುವೆ ಪದೇ ಪದೆ ದಾಂಧಲೆಗಳು ನಡೆಯುತ್ತಿದ್ದವು. ಈ ಕಾರಣದಿಂದ ಈ ಫಲಿತಾಂಶ ಭಾರೀ ಕುತೂಹಲ ಮೂಡಿಸಿತ್ತು.
ಈ ಬಾರಿ ಜೆಎನ್‌ಯು ವಿದ್ಯಾರ್ಥಿ ಸಂಘದ ಚುನಾವಣೆಯಲ್ಲಿ ಎಡಪಕ್ಷಗಳು ನಾಲ್ಕೂ ಸ್ಥಾನಗಳಲ್ಲಿ ಗೆಲುವು ಕಂಡಿದೆ. ಎಬಿವಿಪಿ ಸೋಲು ಅನುಭವಿಸಿದೆ.
ಎಡರಂಗದ ಅಭ್ಯರ್ಥಿಗಳು ಅಧ್ಯಕ್ಷ, ಉಪಾಧ್ಯಕ್ಷ, ಪ್ರಧಾನ ಕಾರ್ಯದರ್ಶಿ ಮತ್ತು ಜಂಟಿ ಕಾರ್ಯದರ್ಶಿ ಎಂಬ ನಾಲ್ಕೂ ಸ್ಥಾನಗಳನ್ನು ಉಳಿಸಿಕೊಂಡಿದ್ದಾರೆ. ಪ್ರಧಾನ ಕಾರ್ಯದರ್ಶಿ ಸ್ಥಾನವನ್ನು ಎಡ ಮೀಸಲಾದ BAPSA ಅಭ್ಯರ್ಥಿಯು ಗೆದ್ದಿದ್ದಾರೆ. ವಿಶೇಷ ಅಂದ್ರೆ ಬರೋಬ್ಬರಿ 27 ವರ್ಷಗಳ ಬಳಿಕ ಜೆಎನ್‌ಯೂಗೆ ದಲಿತ ಸಮುದಾಯದ ವಿದ್ಯಾರ್ಥಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
4 ವರ್ಷಗಳ ಬಳಿಕ ನಡೆದ ಜವಾಹರ್‌ಲಾಲ್ ನೆಹರೂ ವಿದ್ಯಾರ್ಥಿ ಘಟಕ ಚುನಾಣೆಯಲ್ಲಿ ಶೇಕಡಾ 73ರಷ್ಟು ಮತದಾನವಾಗಿತ್ತು. 12 ವರ್ಷಗಳಲ್ಲೇ ಗರಿಷ್ಠ ಮತದಾನ ದಾಖಲಾಗಿತ್ತು. 7,700 ವಿದ್ಯಾರ್ಥಿಗಳು ತಮ್ಮ ಹಕ್ಕು ಚಲಾಯಿಸಿದ್ದರು.