ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Saturday, July 31, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಕದ್ರಾ ಜಲಾಶಯ ಪ್ರದೇಶದಲ್ಲಿ ಭಾರೀ ಮಳೆ: ಸ್ಥಳಾಂತರಕ್ಕೆ ಜನರಿಗೆ ಸೂಚನೆ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸ ದಿಗಂತ ವರದಿ, ಕಾರವಾರ:

ಕದ್ರಾ ಜಲಾಶಯ ಪ್ರದೇಶದಲ್ಲಿ ಭಾರೀ ಪ್ರಮಾಣದಲ್ಲಿ ಮಳೆ ಸುರಿಯುತ್ತಿದ್ದ ಪರಿಣಾಮ ಜಲಾಶಯ ಭರ್ತಿಯಾಗುವ ಸಾಧ್ಯತೆ ಇರುವುದರಿಂದ ಅಣೆಕಟ್ಟಿನ ಕೆಳ ಪ್ರದೇಶದಲ್ಲಿ ವಾಸವಾಗಿರುವ ಜನರು ತಮ್ಮ ಜಾನುವಾರುಗಳೊಂದಿಗೆ ಮುಂಜಾಗ್ರತಾ ಕ್ರಮವಾಗಿ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಹಾಗೂ ಸುತ್ತ ಮುತ್ತಲಿನ ನದಿ ತೀರದಲ್ಲಿ ದೋಣಿ ಸಂಚಾರ, ಮೀನುಗಾರಿಕೆ ನಡೆಸದಂತೆ ಎಚ್ಚರಿಕೆ ವಹಿಸಬೇಕೆಂದು ಕರ್ನಾಟಕ ವಿದ್ಯುತ್ ನಿಗಮದ ಕದ್ರಾ ವಿಭಾಗ ಕಾರ್ಯನಿರ್ವಾಹಕ ಅಭಿಯಂತರರ ಪ್ರಕಟನೆಯಲ್ಲಿ ತಿಳಿಸಲಾಗಿದೆ.
ಜಲಾಶಯದ ಗರಿಷ್ಠ ಮಟ್ಟ 34.50 ಮೀಟರ್ ಆಗಿದ್ದು ಬುಧವಾರ ಬೆಳಗ್ಗೆ 8 ಗಂಟೆಗೆ ಜಲಾಶಯದ ಮಟ್ಟ 30.60 ಮೀಟರ್ ತಲುಪಿದೆ ಅಣೆಕಟ್ಟಿನ ಸುರಕ್ಷತಾ ದೃಷ್ಟಿಯಿಂದ ಜಲಾಶಯದ ಮಟ್ಟ 32.50 ತಲುಪಿದ ತಕ್ಷಣ ಹೆಚ್ಚುವರಿ ನೀರನ್ನು ಹೊರಬಿಡಲಾಗುವುದು ಮಳೆ ಮುಂದುವರಿದಲ್ಲಿ ಯಾವುದೇ ಕ್ಷಣದಲ್ಲಿ ಜಲಾಶಯದ ಹೆಚ್ಚಿನ ನೀರನ್ನು ಹೊರಬಿಡಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss