Saturday, August 13, 2022

Latest Posts

ಕೊಡಗು ಜಿಲ್ಲೆಯಲ್ಲಿ ಭಾರೀ ವಾಹನಗಳ ಸಂಚಾರ ನಿಷೇಧ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸ ದಿಗಂತ ವರದಿ, ಮಡಿಕೇರಿ:

ಕೊಡಗು ಜಿಲ್ಲೆಯಲ್ಲಿ ಭಾರೀ ವಾಹನ ಸಂಚಾರದ ಸಂಬಂಧ ಹೊರಡಿಸಲಾಗಿದ್ದ ನಿರ್ಬಂಧಕಾಜ್ಞೆಯನ್ನು ಮಾರ್ಪಾಡುಗೊಳಿಸಿ
ಜಿಲ್ಲಾ ದಂಡಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ಆದೇಶ ಹೊರಡಿಸಿದ್ದಾರೆ.
ಈ ಆದೇಶವು ಆಗಸ್ಟ್, 16 ರವರೆಗೆ ಜಾರಿಯಲ್ಲಿರಲಿದೆ.
ನಿರ್ಬಂಧಿತ ವಾಹನಗಳು: ವಾಹನದ ನೋಂದಣಿ ತೂಕ 16,200 ಕೆ.ಜಿ.ಗಿಂತ ಹೆಚ್ಚಿನ ತೂಕದ ಸರಕು ಸಾಗಾಣಿಕೆಯ ವಾಹನಗಳು, ಭಾರೀ ವಾಹನಗಳಾದ ಬುಲೆಟ್ ಟ್ಯಾಂಕರ್ ಗಳು, ಶಿಪ್ ಕಾರ್ಗೋ ಕಂಟೈನರ್ ಗಳು, ಲಾಂಗ್ ಚಾಸಿಸ್(ಮಲ್ಟಿ ಆಕ್ಸಿಲ್) ವಾಹನಗಳು.
ನಿರ್ಬಂಧದಿಂದ ವಿನಾಯಿತಿ ನೀಡಿದ ವಾಹನಗಳು: ಅಡುಗೆ ಅನಿಲ ಮತ್ತು ಇಂಧನ ಪೂರೈಕೆ ವಾಹನಗಳು, ಹಾಲು ಪೂರೈಕೆ ವಾಹನಗಳು, ಸರ್ಕಾರಿ ಕೆಲಸದ ನಿಮಿತ್ತ ಉಪಯೋಗಿಸಲ್ಪಡುವ ವಾಹನಗಳು, ಶಾಲಾ ಕಾಲೇಜು ಮತ್ತು ಸಾರ್ವಜನಿಕ ಪ್ರಯಾಣಿಕರ ವಾಹನಗಳು(ಮಲ್ಟಿ ಆಕ್ಸಿಲ್ ಬಸ್‍ಗಳು ಸೇರಿದಂತೆ), ವಾಹನದ ನೋಂದಣಿ ತೂಕ 16,200 ಕೆ.ಜಿ.ಗಿಂತ ಕಡಿಮೆ ತೂಕದ ಸರಕು ಸಾಗಾಣಿಕೆಯ ವಾಹನಗಳು. ಇದರೊಂದಿಗೆ ಸಂಬಂಧಪಟ್ಟ ಇಲಾಖೆಗಳು ಹೊರಡಿಸಿರುವ ಅಥವಾ ಇಲಾಖೆ ವತಿಯಿಂದ ಚಾಲ್ತಿಯಲ್ಲಿರುವ ಆದೇಶ, ನಿಯಮ, ನಿರ್ಬಂಧ, ಮಾರ್ಗಸೂಚಿಗಳು ಜಾರಿಯಲ್ಲಿರಲಿದೆ. ಈ‌ ಆದೇಶದ ಉಲ್ಲಂಘನೆಯು ಸಂಬಂಧಪಟ್ಟ ಕಾಯ್ದೆಗಳಡಿ ದಂಡನೀಯವಾಗಿದೆ. ಉಳಿದಂತೆ ಯಾವುದೇ ಬದಲಾವಣೆಗಳು ಇರುವುದಿಲ್ಲ ಎಂದು ಜಿಲ್ಲಾ ದಂಡಾಧಿಕಾರಿ ಹಾಗೂ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಅಧ್ಯಕ್ಷರಾದ ಚಾರುಲತಾ ಸೋಮಲ್ ಅವರು ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss