ಕೊಡಗು ಜಿಲ್ಲೆಯಲ್ಲಿ 14 ಮಂದಿಗೆ ಕೊವಿಡ್ ಪ್ರಕರಣ ದೃಢ

ಹೊಸದಿಗಂತ ವರದಿ,ಮಡಿಕೇರಿ:

ಕೊಡಗು ಜಿಲ್ಲೆಯಲ್ಲಿ ಮಂಗಳವಾರ 14 ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿವೆ.
ಮಡಿಕೇರಿ ತಾಲೂಕಿನಲ್ಲಿ 3,ಸೋಮವಾರಪೇಟೆ ತಾಲೂಕಿನಲ್ಲಿ 5,ವೀರಾಜಪೇಟೆ ತಾಲೂಕಿನಲ್ಲಿ 6ಹೊಸ ಪ್ರಕರಣಗಳು ವರದಿಯಾಗಿವೆ.
ಇದರೊಂದಿಗೆ ಜಿಲ್ಲೆಯಲ್ಲಿನ ಕೊರೋನಾ ಸೋಂಕಿತರ ಒಟ್ಟು ಸಂಖ್ಯೆ 47,553ರಷ್ಟಾಗಿದ್ದು, ಕಳೆದ 24ಗಂಟೆಗಳಲ್ಲಿ 11 ಮಂದಿ ಗುಣಮುಖರಾಗುವುದರೊಂದಿಗೆ ಇದುವರೆಗೆ ಒಟ್ಟು
46,449 ಮಂದಿ ಸೋಂಕು ಮುಕ್ತರಾಗಿದ್ದಾರೆ.ಅಲ್ಲದೆ 449 ಮಂದಿ ಸಾವಿಗೀಡಾಗಿದ್ದಾರೆ.
ಜಿಲ್ಲೆಯಲ್ಲಿ ಪ್ರಸಕ್ತ 655 ಸಕ್ರಿಯ ಪ್ರಕರಣಗಳಿದ್ದು, ಕಂಟೈನ್ ಮೆಂಟ್ ವಲಯಗಳ ಸಂಖ್ಯೆ 78ಹಾಗೂ ಕೋವಿಡ್ ಪಾಸಿಟಿವಿಟಿ ಪ್ರಮಾಣ ಶೇ.0.73ರಷ್ಟಿದೆ ಎಂದು ಜಿಲ್ಲಾಧಿಕಾರಿ ಡಾ. ಬಿ.ಸಿ.ಸತೀಶ ಅವರು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!