ರಾಜ್ಯದಲ್ಲಿ ಕಳೆದ 3 ವರ್ಷಗಳಲ್ಲಿ 13,719 ಪೋಕ್ಸೋ ಕೇಸ್, ಶಿಕ್ಷೆಯಾಗಿದ್ದು ಮಾತ್ರ..

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಅಪ್ರಾಪ್ತೆಯರ ಮೇಲೆ ನಡೆಯುವ ಲೈಂಗಿಕ ದೌರ್ಜನ್ಯ ಪ್ರಕರಣಗಳ ಸಂಖ್ಯೆ ರಾಜ್ಯದಲ್ಲಿ ಅಧಿಕವಾಗುತ್ತಿದೆ. ಬಿಗಿಯಾದ ಕಾನೂನು ರೂಪಿಸಿ ಈ ಬಗ್ಗೆ ನಿರಂತರ ಜಾಗೃತಿ ಮೂಡಿಸುತ್ತಿದ್ದರೂ, ಬಾಲಕಿಯರ ಮೇಲೆ ಹೀನ ಕೃತ್ಯ ಮುಂದುವರೆದಿರುವುದು ಆತಂಕಕಾರಿಯಾಗಿದೆ.

18 ವರ್ಷದೊಳಗಿನ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯವೆಸಗುವುದು ಕಂಡುಬಂದರೆ ಅಂತಹವರ ವಿರುದ್ಧ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ ಕಾಯ್ದೆಯಡಿ (ಪೋಕ್ಸೋ) ಪ್ರಕರಣ ದಾಖಲಾಗಲಿದೆ. ಈ ಸಂಬಂಧ 2022ರಿಂದ ಈ ವರ್ಷದ ಜುಲೈ ಅಂತ್ಯಕ್ಕೆ ರಾಜ್ಯದಲ್ಲಿ 13,719 ಪ್ರಕರಣಗಳು ದಾಖಲಾಗಿವೆ. ಈ ಪೈಕಿ 348 ಕೇಸ್​​ಗಳಲ್ಲಿ ಮಾತ್ರ ಆರೋಪಿಗಳಿಗೆ ಶಿಕ್ಷೆಯಾಗಿದೆ. ಇನ್ನುಳಿದ ಪ್ರಕರಣಗಳು ನ್ಯಾಯಾಲಯದಲ್ಲಿ ವಿಚಾರಣೆ ಹಂತದಲ್ಲಿವೆ ಎಂದು ಸರ್ಕಾರ ನೀಡಿದ ಅಂಕಿ – ಅಂಶಗಳಿಂದ ಬಹಿರಂಗಗೊಂಡಿದೆ.

2022ರಲ್ಲಿ 3209 ಪೋಕ್ಸೋ ಪ್ರಕರಣ ದಾಖಲಾಗಿದ್ದರೆ 2024ರಲ್ಲಿ ಈ ಸಂಖ್ಯೆ 4064ಕ್ಕೆ ಏರಿಕೆಯಾಗಿದೆ. ಈ ಮೂಲಕ ಶೇಕಡಾ 26ರಷ್ಟು ಪ್ರಕರಣಗಳು ಹೆಚ್ಚಳವಾಗಿವೆ. 2022ರಲ್ಲಿ ದಾಖಲಾಗಿದ್ದ 3,209 ಪ್ರಕರಣಗಳ ಪೈಕಿ 186 ಪ್ರಕರಣಗಳಲ್ಲಿ ಮಾತ್ರ ಶಿಕ್ಷೆಯಾಗಿವೆ. ಇನ್ನು 1562 ಕೇಸ್​​ಗಳು ನ್ಯಾಯಾಲಯದಲ್ಲಿ ವಜಾಗೊಂಡರೆ, 1224 ಪ್ರಕರಣಗಳು ವಿಚಾರಣೆ ಹಂತದಲ್ಲಿವೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!