‘ವೀರ ಕಂಬಳ’ ಸಿನಿಮಾದಲ್ಲಿ ಬಣ್ಣ ಹಚ್ಚಿದ ಡಾ. ವೀರೇಂದ್ರ ಹೆಗ್ಗಡೆ ನಟನೆ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಎಸ್.ವಿ. ರಾಜೇಂದ್ರ ಸಿಂಗ್ ಬಾಬು ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ‘ವೀರ ಕಂಬಳ’ ಸಿನಿಮಾದಲ್ಲಿ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಅವರು ಅತಿಥಿ ಪಾತ್ರವನ್ನು ಮಾಡುತ್ತಿದ್ದಾರೆ.

ಇದೀಗ ವೀರೇಂದ್ರ ಹೆಗ್ಗಡೆ ಅವರಿಗೆ ಮೇಕಪ್‌ ಮಾಡುತ್ತಿರುವ ಫೋಟೊ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ.
‘ವೀರ ಕಂಬಳ’ ಸಿನಿಮಾ ಕನ್ನಡ, ತುಳು ಸೇರಿದಂತೆ ಹಲವು ಭಾಷೆಗಳಲ್ಲಿ ಮೂಡಿ ಬರಲಿದ್ದು, ಸಂಪೂರ್ಣವಾಗಿ ಕಂಬಳ ಕ್ರೀಡೆಯನ್ನು ಹಿನ್ನೆಲೆಯಾಗಿಟ್ಟುಕೊಂಡು ಬರುತ್ತಿರುವ ಸಿನಿಮಾ.

ಕಂಬಳ ಕೋಣ ಓಡಿಸುವುದರಲ್ಲೇ ಪರಿಣಿತಿ ಹೊಂದಿರುವ ಶ್ರೀನಿವಾಸ್ ಗೌಡ ಕೂಡ ಈ ಸಿನಿಮಾದಲ್ಲಿ ಪಾತ್ರ ಮಾಡಿದ್ದಾರೆ. ಇವರೊಂದಿಗೆ ಕಲಾವಿದ ಸ್ವರಾಜ್ ಶೆಟ್ಟಿ ಕೂಡ ಕಂಬಳದ ಕೋಣ ಓಡಿಸುವ ದೃಶ್ಯದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

ರವಿಶಂಕರ್, ರಾಧಿಕಾ ಚೇತನ್, ನವೀನ್ ಪಡೀಲ್ ಸೇರಿದಂತೆ ಸಾಕಷ್ಟು ಕಲಾವಿದರು ಈ ಚಿತ್ರದ ತಾರಾಗಣದಲ್ಲಿ ಇದ್ದಾರೆ.
ತುಳು ಭಾಷೆಯಲ್ಲೂ ಚಿತ್ರವನ್ನು ಏಕಕಾಲದಲ್ಲಿ ನಿರ್ದೇಶಿಸಲಿದ್ದು, ಇದಕ್ಕೆ ‘ಬರ್ದೆದ್‌ ಕಂಬಳ’ ಎಂಬ ಹೆಸರನ್ನಿಟ್ಟಿದ್ದಾರೆ. ಇದರರ್ಥ ಬಿರುಸಿನ ಕಂಬಳ. ಅಲ್ಲದೆ, ಇನ್ನಿತರ ಹಲವು ಭಾಷೆಗಳಿಗೆ ಡಬ್‌ ಮಾಡಲಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!