Tuesday, July 5, 2022

Latest Posts

ಪಕ್ಷದಲ್ಲಿ ಪ್ರತಿಯೊಬ್ಬರಿಗೂ ಮುಕ್ತವಾಗಿ ಹೇಳಿಕೆ ನೀಡಲು ಅವಕಾಶವಿದೆ: ಜಗದೀಶ ಶೆಟ್ಟರ್

ಹೊಸ ದಿಗಂತ ವರದಿ, ಹುಬ್ಬಳ್ಳಿ:

ಪಕ್ಷದಲ್ಲಿ ಪ್ರತಿಯೊಬ್ಬರಿಗೂ ಮುಕ್ತವಾಗಿ ಹೇಳಿಕೆ ನೀಡಲು ಅವಕಾಶವಿದೆ. ಶಾಸಕರು ಹಾಗೂ ಸಚಿವರು ವೈಯಕ್ತಿಕವಾಗಿ ನೀಡುವ ಹೇಳಿಕೆಗಳು ಪಕ್ಷ ವಿರೋಧಿ ಚಟುವಟಿಕೆಯಲ್ಲ ಎಂದು ಮಾಜಿ ಸಿಎಂ ಜಗದೀಶ ಶೆಟ್ಟರ ಹೇಳಿದರು.
ನಗರದಲ್ಲಿ ಮಾಧ್ಯಮದವರೊಂದಿಗೆ ಗುರುವಾರ ಮಾತನಾಡಿದ ಅವರು, ವೈಯಕ್ತಿಕ ಹೇಳಿಕೆ ಪಕ್ಷ ವಿರೋಧಿ ಎಂದು ಹೇಳುವುದು ಸರಿಯಲ್ಲ ಎಂದು
ಸಂಪುಟದಲ್ಲಿರುವ ಹಿರಿಯನ್ನು ಕೈಬಿಟ್ಟು ಹೊಸಬರಿಗೆ ಅವಕಾಶ ನೀಡಬೇಕು ಎಂಬ ಶಾಸಕ ಎಂ.ಪಿ. ರೇಣುಕಾಚಾರ್ಯ ಅವರ ಹೇಳಿಕೆ ಕುರಿತು ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿ, ನನ್ನ ಹೇಳಿಕೆಯನ್ನು ಪಕ್ಷದ ಆಂತರಿಕ ಸಭೆಯಲ್ಲಿ ವ್ಯಕ್ತಪಡಿಸುತ್ತೇನೆ ಎಂದರು.
ವಿಧಾನಪರಿಷತ್ ಚುನಾವಣೆಯಲ್ಲಿ ಹದಿನೈದು ಸ್ಥಾನಗಳ ಗುರಿ ಪೈಕಿ ಬಿಜೆಪಿ 11ರಲ್ಲಿ ಗೆದ್ದಿದೆ. ಹಿಂದೆ ಕೇವಲ ಆರು ಸ್ಥಾನಗಳಷ್ಟೇ ಇದ್ದವು. ಹಾಗಾಗಿ, ಈ ಚುನಾವಣೆಯಲ್ಲಿ ಪಕ್ಷ ಉತ್ತಮ ಸಾಧನೆಯನ್ನೇ ಮಾಡಿದೆ. ಹಾಗೆ ನೋಡಿದರೆ, ಕಾಂಗ್ರೆಸ್ ಹಿನ್ನಡೆ ಸಾಧಿಸಿದೆ ಎಂದು ಹೇಳಿದರು.
ಈ ಚುನಾವಣೆಗಳು ಸ್ಥಳೀಯ ವಿಷಯಗಳನ್ನು ಆಧರಿಸಿ ಹಾಗೂ ವ್ಯಕ್ತಿಗತವಾಗಿಯೂ ನಡೆಯುತ್ತವೆ. ಹಾಗಾಗಿ, ಪಕ್ಷದ ಶಾಸಕರೇ ಹೆಚ್ಚಾಗಿದ್ದರೂ ಫಲಿತಾಂಶದಲ್ಲಿ ವ್ಯತ್ಯಾಸವಾಗುವುದುಂಟು. ಎಲ್ಲಾ ಪಕ್ಷಗಳಲ್ಲೂ ಹೀಗಾಗುವುದು ಸಾಮಾನ್ಯ ಎಂದು ತಿಳಿಸಿದರು.
ಕೋರ್ ಕಮಿಟಿ ಸಭೆ: ಬಿ.ಎಸ್. ಯಡಿಯೂರಪ್ಪ ಅವರು ವಿದೇಶ ಪ್ರವಾಸ ಕೈಗೊಂಡಿದ್ದರಿಂದ ಹಾಗೂ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರು ಬೇಗನೆ ದೆಹಲಿಗೆ ಹೊರಟರು. ಎಲ್ಲರೂ ಉಪಸ್ಥಿತರಿದ್ದಾಗ ಸಭೆ ನಡೆಸುವುದಾಗಿ ತೀರ್ಮಾನಿಸಿ, ಕಾರ್ಯಕಾರಿ ಸಮಿತಿ ಸಭೆಯನ್ನು ಮುಂದೂಡಲಾಯಿತು. ಆಗ, ಬೆಳಗಾವಿಯಲ್ಲಿ ಪಕ್ಷದ ಅಭ್ಯರ್ಥಿಯ ಸೋಲು ಸೇರಿದಂತೆ ವಿವಿಧ ವಿಷಯಗಳ ಕುರಿತು ಚರ್ಚಿಸಲಾಗುವುದು ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಧಾರವಾಡ ಜಿಲ್ಲಾ ಮಹಾನಗರ ಬಿಜೆಪಿ ಘಟಕದ ಅಧ್ಯಕ್ಷ ಸ್ಥಾನಕ್ಕೆ ಶಾಸಕ ಅರವಿಂದ ಬೆಲ್ಲದ ಅವರು ರಾಜೀನಾಮೆ ನೀಡುವುದಾಗಿ ಹೇಳಿರುವ ಕುರಿತು, ನನಗೇನೂ ಗೊತ್ತಿಲ್ಲ. ನನ್ನ ಅಸಮಾಧಾನದ ಕಾರಣಕ್ಕೆ ರಾಜೀನಾಮೆ ಕೊಡುತ್ತಾರೆಂಬುದು ಸುಳ್ಳು ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯೆ ನೀಡಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss