ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜಸ್ಥಾನದ ಅಲ್ವಾರ್ ಜಿಲ್ಲೆಯ ಮಸೀದಿಯೊಂದರಲ್ಲಿ ಐದು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಧರ್ಮಗುರುವನ್ನು ಬಂಧಿಸಲಾಗಿದೆ.
ಬಾಲಕಿ ತನ್ನ ಮನೆಯ ಬಳಿ ಆಟವಾಡುತ್ತಿದ್ದಾಗ ಆರೋಪಿ 22 ವರ್ಷದ ಮೌಲಿಯಾಗಿರುವ ಅಹ್ಮದ್ ಮಸೀದಿಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ. ಬಾಲಕಿಯನ್ನು ಹುಡುಕಲು ಆಕೆಯ ತಾಯಿ ಅವರ ಮನೆಯ ಎದುರಿನ ಮಸೀದಿಗೆ ಪ್ರವೇಶಿಸಿದಾಗ ವಿಷಯ ಬೆಳಕಿಗೆ ಬಂದಿದೆ.
ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸಲಾಗಿದೆ ಎಂದು ರಾಜ್‌ಗಢ ಎಸ್‌ಎಚ್‌ಒ ರಾಮ್‌ಜಿಲಾಲ್ ಮೀನಾ ತಿಳಿಸಿದ್ದಾರೆ.