ವಸತಿ ಶಾಲೆಗಳಲ್ಲಿ ಮತ್ತೆ ಬರಲಿದೆ “ಜ್ಞಾನ ದೇಗುಲವಿದು ಕೈ ಮುಗಿದು ಒಳಗೆ ಬನ್ನಿ” ಬರಹ

ಹೊಸದಿಗಂತ ಡಿಜಿಟಲ್ ಡೆಸ್ಕ್:

ವಿಜಯಪುರದ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರವೇಶ ದ್ವಾರದಲ್ಲಿ ಕುವೆಂಪು ಅವರ ಜ್ಞಾನದೇಗುಲವಿದು ಕೈ ಮುಗಿದು ಒಳಗೆ ಬಾ ಬರಹವನ್ನು ತೆಗೆದು ಹಾಕಿ ಜ್ಞಾನದೇಗುಲವಿದು, ಧೈರ್ಯವಾಗಿ ಪ್ರಶ್ನಿಸಿ ಎನ್ನುವ ಬದಲಾವಣೆ ಮಾಡಲಾಗಿತ್ತು.

ಇದರಿಂದಾಗಿ ಸಾಕಷ್ಟು ಪರ-ವಿರೋಧ ಚರ್ಚೆಗಳು ನಡೆದಿದ್ದು, ಸಮಾಜ ಕಲ್ಯಾಣ ಇಲಾಖೆಯು ಕುವೆಂಪು ಘೋಷವಾಕ್ಯ ಬದಲಾಯಿಸಲು ಹೇಳಿಲ್ಲ ಎಂದು ಸ್ಪಷ್ಟನೆ ನೀಡಿದೆ.

ಈ ಹಿನ್ನೆಲೆಯಲ್ಲಿ ಬರಹವನ್ನು ಬದಲಾಯಿಸಿ ಮೊದಲಿದ್ದಂತೆ ಜ್ಞಾನದೇಗುಲವಿದು ಕೈ ಮುಗಿದು ಒಳಗೆ ಬನ್ನಿ ಎಂದು ವಾಪಾಸ್ ಬರೆಸಲು ಪ್ರಧಾನ ಕಾರ್ಯದರ್ಶಿ ಮಣಿವಣ್ಣನ್ ಸೂಚನೆ ನೀಡಿದ್ದಾರೆ.

ಇಲಾಖೆಯ ಪ್ರಧಾನ ಕಾರ್ಯದರ್ಶಿ ಮಣಿವಣ್ಣನ್ ಅವರ ಆದೇಶದ ಮೇಲೆ ಈ ರೀತಿ ಬದಲಾವಣೆ ಮಾಡಿದ್ದೇವೆ. ಆದರೆ ಅವರು ಟೆಲಿಗ್ರಾಂನಲ್ಲಿ ಸೂಚನೆ ನೀಡಿದ್ದರು. ಈ ಬಗ್ಗೆ ಸರ್ಕಾದ ಸುತ್ತೋಲೆ ಇಲ್ಲ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಪುಂಡಲೀಕ ಮಾನವರ ಹೇಳಿದ್ದರು.

ಈ ಶಾಲೆಗಳಲ್ಲಿ ಓದುವ ಮಕ್ಕಳ ಪೋಷಕರು ಧೈರ್ಯವಾಗಿ ಪ್ರಶ್ನೆ ಮಾಡಲಿ ಎನ್ನುವ ಉದ್ದೇಶದಿಂದ ಈ ರೀತಿ ಬದಲಾವಣೆ ಮಾಡಲಾಗಿದೆ ಎನ್ನಲಾಗಿದೆ. ವಸತಿ ಶಾಲೆಗಳಿಗೆ ಮಕ್ಕಳನ್ನು ಕಳಿಸಿದ ಪೋಷಕರಿಗೆ ನೂರಾ ಎಂಟು ಆತಂಕಗಳು ಇರುತ್ತವೆ. ಹಾಗಾಗಿ ಇವುಗಳ ಬಗ್ಗೆ ಪ್ರಶ್ನೆ ಮಾಡಿ ತಿಳಿದುಕೊಳ್ಳಲಿ ಎನ್ನುವುದು ಬರವಣಿಗೆ ಆಶಯವಾಗಿದೆ ಎನ್ನಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!