ರಾಜ್ಯದಲ್ಲಿ ಇಂದು 20,505 ಜನರಿಗೆ ಕೊರೋನಾ ದೃಢ, 81 ಮಂದಿ ಸಾವು

ದಿಗಂತ ಡಿಜಿಟಲ್ ಡೆಸ್ಕ್

ರಾಜ್ಯದಲ್ಲಿ ಇಂದು ಹೊಸದಾಗಿ 20,505 ಜನರಿಗೆ ಕೊರೋನಾ ಪಾಸಿಟಿವ್​ ದೃಢಪಟ್ಟಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ರಾಜ್ಯದಲ್ಲಿನ ಒಟ್ಟು ಸೋಂಕಿತರ ಸಂಖ್ಯೆ 38,244,338ಕ್ಕೆ ಏರಿಕೆಯಾಗಿದೆ. ಇಂದು 40,903 ಜನ ಕೋವಿಡ್​​ ಸೋಂಕಿತರು ಗುಣಮುಖರಾಗಿದ್ದು, ಇದುವರೆಗೆ 36,27,925 ಜನರು ಚೇತರಿಸಿಕೊಂಡಿದ್ದಾರೆ. ಇಂದು 81 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ 1,77,244 ಪ್ರಕರಣಗಳು ಸಕ್ರಿಯವಾಗಿವೆ. ಕೋವಿಡ್ ಪಾಸಿಟಿವಿಟಿ ದರ ಶೇ.12.55 ಹಾಗೂ ಸಾವಿನ ಪ್ರಮಾಣ ಶೇ. 0.39 ಇದೆ.
ಬೆಂಗಳೂರಿನಲ್ಲಿ ಇಂದು ಹೊಸದಾಗಿ 8850 ಮಂದಿಗೆ ಕೊರೋನಾ ಪಾಸಿಟಿವ್ ದೃಢ ಪಟ್ಟಿದ್ದು, 13 ಮಂದಿ ಸಾವನ್ನಪ್ಪಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!