ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಮತ್ತೆ ಹೊಸ ಸೋಂಕಿತರ ಸಂಖ್ಯೆ 25 ಸಾವಿರ ಗಡಿ ದಾಟಿದ್ದು, ಇಂದು ಹೊಸದಾಗಿ 28,723 ಕೋವಿಡ್ ಪಾಸಿಟಿವ್ ದೃಢಪಟ್ಟಿದ್ದು, 14 ಮಂದಿ ಮೃತಪಟ್ಟಿದ್ದಾರೆ.
ಟ್ವೀಟ್ ಮೂಲಕ ಮಾಹಿತಿ ನೀಡಿದ ಆರೋಗ್ಯ ಸಚಿವ ಡಾ.ಕೆ ಸುಧಾಕರ್ , ಬೆಂಗಳೂರಿನಲ್ಲಿಯೇ 20,121 ಮಂದಿಗೆ ವೈರಸ್ ದೃಢಪಟ್ಟಿದ್ದು, , 7 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ.
ರಾಜ್ಯದಲ್ಲಿ ಪಾಸಿಟಿವಿಟಿ ರೇಟ್ ಶೇ.12.98 ರಷ್ಟಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 1,41,337ಕ್ಕೆ ಏರಿಕೆಯಾಗಿದೆ.