ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………..
ಹೊಸದಿಗಂತ ಆನ್ ಲೈನ್ ಡೆಸ್ಕ್:
ರಾಜ್ಯದಲ್ಲಿ ಇಂದು ಹೊಸದಾಗಿ 39,305 ಜನರಿಗೆ ಕೊರೋನಾ ಸೋಂಕು ದೃಢಪಟ್ಟಿದ್ದು 596 ಜನರು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದು,ಕೊರೋನಾದಿಂದ ಸಾವನ್ನಪ್ಪಿದವರ ಸಂಖ್ಯೆ 19,372ಕ್ಕೆ ಏರಿಕೆಯಾಗಿದೆ.
ಈ ಕುರಿತಂತೆ ರಾಜ್ಯ ಆರೋಗ್ಯ ಇಲಾಖೆ ಕೊರೋನಾ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ಒಟ್ಟು ಸೋಂಕಿತರ ಸಂಖ್ಯೆ 19,73,683ಕ್ಕೆ ಏರಿಕೆಯಾಗಿದೆ. ಇವರಲ್ಲಿ ಇಂದು 32,188 ಜನರು ಸೇರಿದಂತೆ ಇದುವರೆಗೆ 13,83,285 ಜನರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರಿಂದಾಗಿ ರಾಜ್ಯದಲ್ಲಿ 5,71,006 ಸಕ್ರೀಯ ಸೋಂಕಿತರು ಇರುವುದಾಗಿ ತಿಳಿಸಿದೆ.