ಹೊಸ ದಿಗಂತ ಆನ್ ಲೈನ್ ಡೆಸ್ಕ್:
ರಾಜ್ಯದಲ್ಲಿ ಕೊರೋನಾ ಸೋಂಕಿನ ಪ್ರಕರಣಗಳ ಸಂಖ್ಯೆ ಇಳಿಕೆ ಕಂಡಿವೆ. ಇಂದು ಹೊಸದಾಗಿ 783 ಜನರಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಇದರಿಂದ ಸೋಂಕಿತರ ಸಂಖ್ಯೆ 29,67,866ಕ್ಕೆ ಏರಿಕೆಯಾಗಿದೆ. ಇಂದು 16 ಜನರು ಸಾವನ್ನಪ್ಪಿರೋದಾಗಿ ತಿಳಿದು ಬಂದಿದೆ. ಇದರಿಂದಾಗಿ ಸೋಂಕಿನಿಂದ ಸಾವನ್ನಪ್ಪಿದವರ ಸಂಖ್ಯೆ 37.603ಕ್ಕೆ ಏರಿಕೆಯಾಗಿದೆ.
ಇಂದು 1139 ಸೇರಿದಂತೆ ಇದುವರೆಗೆ 29,14,852 ಸೋಂಕಿತರು ಗುಣಮುಖರಾಗಿದ್ದಾರೆ. ರಾಜ್ಯದಲ್ಲಿ 15.383 ಸಕ್ರೀಯ ಸೋಂಕಿತರು ಇರುವುದಾಗಿ ತಿಳಿಸಿದೆ.