ಹೊಸದಿಗಂತ ಡಿಜಿಟಲ್ ಡೆಸ್ಕ್
ರಾಜ್ಯದಲ್ಲಿ ಕೊರೋನಾ ಸೋಂಕಿನ ಪ್ರಮಾಣ ಹೆಚ್ಚುತ್ತಿರುವಂತೆ ಕಂಡುಬರುತ್ತಿದ್ದು, ಭಯಪಡುವ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ನಾವು ಸೋಂಕು ನಿಯಂತ್ರಕ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದೇವೆ.ಅನಗತ್ಯವಾಗಿ ಗಾಬರಿಪಡುವ ಅಗತ್ಯವಿಲ್ಲ ಎಂದು ಬೊಮ್ಮಾಯಿ ತಿಳಿಸಿದರು.
ಜಿಲ್ಲೆಗಳಲ್ಲಿ ಕೋವಿಡ್-19 ಪರಿಸ್ಥಿತಿಯನ್ನು ಅವಲೋಕಿಸಿ ಆರೋಗ್ಯ ಕಾರ್ಯದರ್ಶಿಗಳು ಸಿಎಂಗೆ ವರದಿ ಸಲ್ಲಿಸಲಿದ್ದಾರೆ. ಒಂದು ಅಥವಾ ಎರಡು ದಿನಗಳಲ್ಲಿ, ಏನು ಮಾಡಬೇಕೆಂದು ನಾವು ನಿರ್ಧರಿಸುತ್ತೇವೆ ಎಂದು ಹೇಳಿದರು.