ಹೊಸ ದಿಗಂತ್ ಆನ್ ಲೈನ್ ಡೆಸ್ಕ್:
ರಾಜ್ಯದಲ್ಲಿ ಗುರುವಾರ ಕೋವಿಡ್ ಹೊಸ ಪ್ರಕರಣಗಳ ಸಂಖ್ಯೆಯಲ್ಲಿ ಸ್ಫೋಟವಾಗಿದ್ದು , ಕಳೆದ 24 ಗಂಟೆಗಳ ಅವಧಿಯಲ್ಲಿ ಬರೋಬ್ಬರಿ 14738 ಜನರಿಗೆ ಮಹಾಮಾರಿ ಕೋವಿಡ್ ಸೋಂಕು ತಗುಲಿರುವುದು ದೃಢಪಟ್ಟಿದೆ.
ಕರ್ನಾಟಕ ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ವರದಿಗಳ ಪ್ರಕಾರ, ಕಳೆದ 24 ಗಂಟೆಗಳ ಕಾಲಾವಧಿಯಲ್ಲಿ ಪತ್ತೆಯಾಗಿರುವ ಸಕ್ರಿಯ ಪ್ರಕರಣಗಳ ಸಂಖ್ಯೆ 14738 ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 1109650 ಕ್ಕೆ ಏರಿಕೆಯಾಗಿದೆ.
ರಾಜ್ಯದಲ್ಲಿ ಇಂದು 3591 ಜನ ಗುಣಮುಖರಾಗಿದ್ದು, ಇದುವರೆಗೆ 999958 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ 96561 ಸಕ್ರಿಯ ಪ್ರಕರಣಗಳಿದ್ದು, 506 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
66 ಜನ ಸೋಂಕಿತರು ಮೃತಪಟ್ಟಿದ್ದು, ಇದುವರೆಗೆ ಕೋವಿಡ್ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 13112ಕ್ಕೆ ಏರಿಕೆಯಾಗಿದೆ.
ರಾಜಧಾನಿ ಬೆಂಗಳೂರಿನಲ್ಲಿ ಇಂದು 10497 ಜನರಿಗೆ ಕೋವಿಡ್ ಸೋಂಕು ತಗುಲಿದ್ದು , ಒಂದೇ ದಿನ 30 ಜನ ಸೋಂಕಿತರು ಮೃತಪಟ್ಟಿದ್ದು, 71827 ಸಕ್ರಿಯ ಪ್ರಕರಣಗಳಿವೆ.