ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………
ಹೊಸದಿಗಂತ ಆನ್ ಲೈನ್ ಡೆಸ್ಕ್:
ರಾಜ್ಯದಲ್ಲಿ ಇಂದು ಹೊಸದಾಗಿ 11,042 ಜನರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದ್ದು, ಒಟ್ಟು ಸೋಂಕಿತರ ಸಂಖ್ಯೆ 27,39,290ಕ್ಕೆ ಏರಿಕೆ ಯಾಗಿದೆ. ಇಂದು 194 ಮಂದಿ ಸಾವನ್ನಪ್ಪಿದ್ದಾರೆ.ಒಟ್ಟಾರೇ ಮೃತರ ಸಂಖ್ಯೆ 32485 ಆಗಿದೆ.
ಇಂದು15, 721 ಸೋಂಕಿತರು ಕೊರೋನಾದಿಂದ ಗುಣಮುಖರಾಗಿದ್ದು, ಇದುವರೆಗೆ 24,96,132 ಜನರು ಸೋಂಕಿನಿಂದ ಗುಣಮುಖರಾಗಿದ್ದಾರೆ. . ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 210652 ಆಗಿದೆ. ಸೋಂಕಿನ ಖಚಿತ ಪ್ರಕರಣಗಳ ಶೇಕಡಾವಾರು ಪ್ರಮಾಣ ಶೇ. 6.58 ರಷ್ಟಿದ್ದು, ಮರಣ ಪ್ರಮಾಣ ಶೇ. 1.75 ರಷ್ಟಿದೆ.