ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………
ಹೊಸ ದಿಗಂತ ಆನ್ ಲೈನ್ ಡೆಸ್ಕ್:
ರಾಜ್ಯದಲ್ಲಿ ಇಂದು 1189 ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಈ ಮೂಲಕ 29,38,616ಕ್ಕೆ ಏರಿಕೆ ಕಂಡಿದೆ. ಪಾಸಿಟಿವಿಟಿ ದರ 0.94%ರಷ್ಟಿದೆ.
ಇಂದು 1456 ಸೋಂಕಿತರು ಗುಣಮುಖರಾಗಿದ್ದಾರೆ. ಈವರೆಗೆ 28,80,889 ಜನರು ಡಿಸ್ಜಾರ್ಜ್ ಆಗಿದ್ದಾರೆ. ಇತ್ತ ಸಕ್ರಿಯ ಪ್ರಕರಣಗಳು 20,556ರಷ್ಟಿವೆ.
22 ಸೋಂಕಿತರು ಇಂದು ಮೃತಪಟ್ಟಿದ್ದು, ಸಾವಿನ ಸಂಖ್ಯೆ 37,145ಕ್ಕೆ ಏರಿದೆ. ಕೋವಿಡ್ ಡೆತ್ ರೇಟ್ 1.85%ರಷ್ಟಿದೆ.