ರಾಜ್ಯದಲ್ಲಿ ಇಂದು 3202 ಮಂದಿಗೆ ಕೊರೋನಾ ಪಾಸಿಟಿವ್ , ಪಾಸಿಟಿವಿಟಿ ದರ ಶೇ.2.95

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದಲ್ಲಿ ಕೊರೋನಾ ಇಳಿಮುಖವಾಗಿದ್ದು, ಇಂದು ಪಾಸಿಟಿವಿಟಿ ದರ ಶೇಕಡ 2.95 ರಷ್ಟು ಇದೆ
ರಾಜ್ಯದಲ್ಲಿ 3202 ಹೊಸ ಪ್ರಕರಣಗಳು ದಾಖಲಾಗಿದ್ದು, 38 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ. ಇವತ್ತು ಒಂದೇ ದಿನ 1,08,534 ಪರೀಕ್ಷೆ ನಡೆಸಲಾಗಿದ್ದು, 8988 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.
ಬೆಂಗಳೂರಿನಲ್ಲಿ 1293 ಹೊಸ ಪ್ರಕರಣಗಳು ವರದಿಯಾಗಿದ್ದು, ಪಾಸಿಟಿವಿಟಿ ದರ ಶೇಕಡ 2.49 ರಷ್ಟು ಇದೆ. ಬೆಂಗಳೂರಿನಲ್ಲಿ ಇಂದು 10 ಜನ ಸೋಂಕಿತರು ಸಾವನ್ನಪ್ಪಿದ್ದಾರೆ. ಬೆಂಗಳೂರಿನಲ್ಲಿ 15,679 ಸಕ್ರಿಯ ಪ್ರಕರಣಗಳಿವೆ. 3833 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.
ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 39,24,297 ಕ್ಕೆ ಏರಿಕೆಯಾಗಿದ್ದು, ಇದುವರೆಗೆ 39,613 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ. 38,45,903 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!