Friday, August 19, 2022

Latest Posts

ರಾಜ್ಯದಲ್ಲಿ ಇಂದು 677 ಮಂದಿಗೆ ಕೊರೋನಾ ಪಾಸಿಟಿವ್, ಸೋಂಕಿತರ ಸಂಖ್ಯೆ 9,53,813ಕ್ಕೆ ಏರಿಕೆ

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ರಾಜ್ಯದಲ್ಲಿ ಇಂದು 677 ಮಂದಿಗೆ ಕೊರೋನಾ ಪ್ರಕರಣಗಳು ಪತ್ತೆಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 9,53,813ಕ್ಕೆ ಏರಿಕೆಯಾಗಿದೆ.
ಇನ್ನು ಕಳೆದ 24 ಗಂಟೆಯಲ್ಲಿ ಕೊರೋನಾ ಸೋಂಕಿನಿಂದ ನಾಲ್ವರು ಸೋಂಕಿತರು ಮೃತಪಟ್ಟಿದ್ದು, ಸಾವಿನ ಸಂಖ್ಯೆ 12,354ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ರಾಜ್ಯದಲ್ಲಿ ಇಂದು 427 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 9,35,066ಕ್ಕೆ ಏರಿಕೆಯಾಗಿದೆ. ಇನ್ನು 6,374 ಸಕ್ರೀಯ ಪ್ರಕರಣಗಳಿದ್ದು, ಈ ಪೈಕಿ 112 ಮಂದಿ ಕೋವಿಡ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!