Wednesday, July 6, 2022

Latest Posts

ರಾಜ್ಯ-ಕೇಂದ್ರಾಡಳಿತ ಪ್ರದೇಶಗಳಲ್ಲಿ ಈವರೆಗೆ 25 ಕೋಟಿಗೂ ಹೆಚ್ಚು ಲಸಿಕೆ: ಕೇಂದ್ರ ಆರೋಗ್ಯ ಸಚಿವಾಲಯ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
……………………………………………………………

ಹೊಸದಿಗಂತ ಆನ್ ಲೈನ್ ಡೆಸ್ಕ್:

ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ಈವರೆಗೆ 25 ಕೋಟಿಗೂ ಹೆಚ್ಚು ಲಸಿಕೆ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
ಇದುವರೆಗೆ 25,06,41,440 ಮಂದಿಗೆ ಕೋವಿಡ್-19 ಲಸಿಕೆಯನ್ನು ಕೇಂದ್ರ ಸರ್ಕಾರ ಉಚಿತವಾಗಿ ನೀಡಿದೆ .ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಾರ, ಇನ್ನೂ 1,33,68,727 ಕೋವಿಡ್ ಲಸಿಕೆ ಪ್ರಮಾಣಗಳು ರಾಜ್ಯಗಳಿಗೆ ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಲಭ್ಯವಿದೆ. ಮುಂದಿನ ಮೂರು ದಿನಗಳ ಒಳಗೆ ರಾಜ್ಯಗಳು ಲಸಿಕೆಗಳನ್ನು ಸ್ವೀಕರಿಸಲಿದೆ ಎಂದು ಮಾಹಿತಿ ನೀಡಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss