Monday, August 8, 2022

Latest Posts

ತೆಂಕ ಎರ್ಮಾಳಿನಲ್ಲಿ ಸರಣಿ ಅಪಘಾತ: ಮೂರು ವಾಹನಗಳು ಜಖಂ, ಮೂವರಿಗೆ ಗಾಯ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..
ಹೊಸ ದಿಗಂತ ಆನ್ ಲೈನ್ ಡೆಸ್ಕ್
ರಾಷ್ಟ್ರೀಯ ಹೆದ್ದಾರಿ 66 ರ   ಎರ್ಮಾಳು ತೆಂಕ ಗರಡಿ ಬಳಿ ಮೂರು ವಾಹನಗಳ ನಡುವೆ ಸರಣಿ ಅಪಘಾತ ನಡೆದು ರಿಕ್ಷಾ ಚಾಲಕ ಸಹಿತ ಮೂವರು ಗಾಯಗೊಂಡ ಘಟನೆ ಪಡುಬಿದ್ರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದೆ.
ರಾಷ್ಟ್ರೀಯ ಹೆದ್ದಾರಿ 66 ರ ತೆಂಕ ಎರ್ಮಾಳು ಗರಡಿ ಬಳಿ ಪಡುಬಿದ್ರಿಯತ್ತ ಚಲಿಸುತ್ತಿದ್ದ ಆಟೋ ರಿಕ್ಷಕ್ಕೆ ಉಡುಪಿಯಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ಫೊರ್ಡ್ ಕಾರು ಡಿಕ್ಕಿಯಾಗಿದೆ. ಪರಿಣಾಮ ರಿಕ್ಷಾ ಕಮರಿಗೆ ಉರುಳಿದೆ.
 ಈ ಸಂದರ್ಭ ಅದೇ ದಾರಿಯಾಗಿ ಮಂಗಳೂರಿನತ್ತ ಚಲಿಸುತ್ತಿದ್ದ ಮತ್ತೊಂದು ಕಾರು ಅಪಘಾತಕ್ಕೀಡಾದ ಕಾರಿಗೆ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಮೂರೂ ವಾಹನಗಳು ನಜ್ಜುಗುಜ್ಜಾಗಿದೆ.
ಘಟನೆಯಲ್ಲಿ ರಿಕ್ಷಾ ಚಾಲಕ ಮುಲ್ಕಿ ನಿವಾಸಿ ರಾಜೇಶ್ ಸಹಿತ ಇಬ್ಬರು ಪ್ರಯಾಣಿಕರು ಗಾಯಗೊಂಡಿದ್ದು, ಮೂರು ವಾಹನ ಜಖಂ ಗೊಂಡಿದೆ.
 ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ಸಾಗಿಸಲಾಗಿದೆ.  ಘಟನಾ ಸ್ಥಳಕ್ಕೆ ಪಡುಬಿದ್ರಿ ಪೊಲೀಸರು ಭೇಟಿ ನೀಡಿದ್ದು, ತನಿಖೆ ನಡೆಸುತ್ತಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss