ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Friday, May 7, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಉಡುಪಿ ಜಿಲ್ಲೆಯಲ್ಲಿ 529 ಜನರಿಗೆ ಕೊರೋನಾ ಸೋಂಕು, 549 ಮಂದಿ ಚೇತರಿಕೆ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………

ಹೊಸದಿಗಂತ ವರದಿ, ಉಡುಪಿ :

ಉಡುಪಿ ಜಿಲ್ಲೆಯಲ್ಲಿ ಸೋಮವಾರ ಹೊಸದಾಗಿ 529 ಜನರಿಗೆ ಸಾಂಕ್ರಾಮಿಕ ಕೋವಿಡ್ ವ್ಯಾಧಿ ದೃಢಪಟ್ಟರೆ, 549 ಮಂದಿ ಸೋಂಕು ಮುಕ್ತರಾಗಿದ್ದಾರೆ. ಜಿಲ್ಲೆಯಲ್ಲಿ ಸೋಂಕು ದೃಢಪಡುವ ಪ್ರಮಾಣ ಶೇ. 22.55ಕ್ಕೆ ಇಳಿದಿದೆ.
ಸೋಮವಾರ ಜಿಲ್ಲೆಯಲ್ಲಿ ಕೋವಿಡ್ ಪರೀಕ್ಷೆ ನಡೆಸಿದ 2345 ಮಂದಿಯಲ್ಲಿ 529 ಜನರ ವರದಿ ಪಾಸಿಟಿವ್ ಬಂದಿದೆ. ಉಡುಪಿ ತಾಲೂಕಿನ 250, ಕುಂದಾಪುರದ 202, ಕಾರ್ಕಳ ತಾಲೂಕಿನ 73 ಮತ್ತು ಹೊರ ಜಿಲ್ಲೆಗಳ ನಾಲ್ವರಲ್ಲಿ ಸೋಂಕು ಕಾಣಿಸಿಕೊಂಡಿದೆ. ಹೊಸ ಸೋಂಕಿತರಲ್ಲಿ 195 ಜನರಲ್ಲಿ ಲಕ್ಷಣಗಳಿದ್ದರೆ, ಉಳಿದ 334 ಮಂದಿಯಲ್ಲಿ ಲಕ್ಷಣಗಳು ಗೋಚರಿಸಿಲ್ಲ. ಇವರಲ್ಲಿ 33 ಮಂದಿಗೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದುಘಿ, ಉಳಿದವರು ಮನೆ ಆರೈಕೆಯಲ್ಲಿದ್ದಾರೆ.
ಕಳೆದ ಎರಡು ಮೂರು ದಿನಗಳಿಂದ ಸೋಂಕಿನಿಂದ ಚೇತರಿಸಿಕೊಳ್ಳುವವರ ಸಂಖ್ಯೆಯೂ ಗಣನೀಯವಾಗಿ ಏರಿಕೆಯಾಗಿದೆ. ಸೋಮವಾರ ಒಂದೇ ದಿನ 549 ಮಂದಿ ರೋಗ ಮುಕ್ತರಾಗಿದ್ದಾರೆ. ಇವರೊಂದಿಗೆ ಜಿಲ್ಲೆಯಲ್ಲಿ ಈವರೆಗೆ 30,465 ಜನರು ಗುಣಮುಖರಾಗಿದ್ದಾರೆ. ಈವರೆಗೆ ಜಿಲ್ಲೆಯಲ್ಲಿ ಕೋವಿಡ್ ಪರೀಕ್ಷೆಗೊಳಪಟ್ಟ 5,11,951 ಮಂದಿಯಲ್ಲಿ 33,154 ಜನರಿಗೆ ಸೋಂಕು ಖಚಿತಗೊಂಡಿದೆ. ತೀವ್ರತರದ ಸೋಂಕಿನಿಂದ 201 ಮಂದಿ ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲೀಗ ಸಕ್ರಿಯ ಸೋಂಕಿತರ ಸಂಖ್ಯೆಯೂ ಇಳಿಮುಖವಾಗುತ್ತಿದ್ದು, ಪ್ರಸಕ್ತ 2,488 ಮಂದಿಯಲ್ಲಿ ವೈರಸ್ ಸಕ್ರಿಯವಾಗಿದೆ ಎಂದು ಡಿಎಚ್‌ಒ ಡಾ. ಸುಧೀರ್‌ಚಂದ್ರ ಸೂಡ ತಿಳಿಸಿದ್ದಾರೆ.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Whatsapp Group
Telegram

Latest Posts

spot_imgspot_img

Don't Miss