ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………
ಹೊಸ ದಿಗಂತ ವರದಿ, ಮಂಡ್ಯ :
ತಾಲೂಕಿನ ಹೊಳಲು ಗ್ರಾಮದಲ್ಲಿ ಕೋರೋನಾ 2ನೇ ಅಲೆ ತೀವ್ರವಾಗುತ್ತಿರುವ ಹಿನ್ನಲೆಯಲ್ಲಿ ಹೊಳಲು ಗ್ರಾಮ ಪಂಚಾಯಿತಿಯಿಂದ ಗ್ರಾಘಿ.ಪಂ. ಅಧ್ಯಕ್ಷ ಎಚ್.ಡಿ. ರವಿ ಅವರು ರಾಸಾಯನಿಕ ಸಿಂಪಡಣಾ ಕಾರ್ಯಕ್ಕೆ ಚಾಲನೆ ನೀಡಿದರು.
ನಂತರ ಮಾತನಾಡಿದ ಅವರು, ದಿನೇ ದಿನೇ ಗ್ರಾಮದಲ್ಲಿ ಕೊರೋನಾ ಸೋಂಕು ಹೆಚ್ಚುತ್ತಿರುವ ಕಾರಣ ಗ್ರಾಘಿ.ಪಂ. ಅಧಿಕಾರಿಗಳು, ಸಿಬ್ಬಂದಿಗಳೆಲ್ಲರೂ ಸೇರಿ ಗ್ರಾಮದ ಪ್ರಮುಖ ರಸ್ತೆಘಿ, ಚರಂಡಿ ಇತರೆ ಸಾರ್ವಜನಿಕ ಸ್ಥಳಗಳಲ್ಲಿ ರಾಸಾಯನಿಕ ಸಿಂಪಡಣೆ ಮಾಡಲಾಯಿತು ಎಂದರು.
ಪಿಡಿಓ ಮಾತನಾಡಿ, ಕೊರೋನಾ ಸೋಂಕು ಹೆಚ್ಚುತ್ತಿರುವ ಕಾರಣ ಸರ್ಕಾರದ ಆದೇಶದ ಮೇರೆಗೆ ಸಾರ್ವಜನಿಕರು ಯಾರೂ ಮನೆಯಿಂದ ಹೊರಗೆ ಬರಬಾರದು. ಅಗತ್ಯ ವಸ್ತುಗಳ ಖರೀದಿಗೆ ಮಾತ್ರ ನಿಗಧಿತ ಸಮಯದಲ್ಲಿ ಮಾತ್ರ ಹೊರಗೆ ಬಂದು ವಸ್ತುಗಳನ್ನು ಖರೀದಿಸಿ ಶೀಘ್ರ ಮನೆ ಸೇರಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಸಾರ್ವಜನಿಕರ ಸಹಕಾರವಿಲ್ಲದೆ ಸೋಂಕು ಕಡಿಮೆ ಮಾಡಲು ಸಾಧ್ಯವಿಲ್ಲ. ಸಮುದಾಯದ ಸಹಕಾರ ಅತ್ಯಗತ್ಯ. ಪ್ರತಿಯೊಬ್ಬರೂ ಮಾಸ್ಕ್ ಧರಿಸಬೇಕು. ಅಂತರ ಕಾಯ್ದುಕೊಳ್ಳಬೇಕು. ಸ್ಯಾನಿಟೈಸರ್ ಬಳಸಬೇಕು ಎಂದು ಕಿವಿಮಾತು ಹೇಳಿದರು.
ಸದಸ್ಯರಾದ ನಾರಾಯಣ, ಅಭಿನಂದನ್, ಜಯಪ್ರಕಾಶ್, ಪಲ್ಲವಿ, ಜಯಪ್ರಕಾಶ್ನಾರಾಯಣ್, ಯುವ ಮುಖಂಡ ಚೇತನ್, ಗೌರಮ್ಮಘಿ, ಮಂಜು, ಗಣೇಶ್, ಕಾರ್ಯದರ್ಶಿ ಪ್ರಕಾಶ್ ಮತ್ತಿತರರು ಜಾಗೃತಿ ಮೂಡಿಸಿದರು.