spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Thursday, December 9, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಗ್ರಾಮಗಳಲ್ಲಿನ ಸಮಸ್ಯೆಗೆ ಪರಿಹಾರ ದೊರಕಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದ ಡಿಸಿ ಎಸ್. ಅಶ್ವತಿ

- Advertisement -Nitte

ಹೊಸ ದಿಗಂತ ವರದಿ, ಮಂಡ್ಯ :

ಗ್ರಾಮಗಳಲ್ಲಿನ ಸಮಸ್ಯೆಗಳಿಗೆ ತಾಲೂಕು ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳು, ಕಂದಾಯ ಇಲಾಖೆ ಅಧಿಕಾರಿಗಳು ಪರಿಹರಿಸುವ ಪ್ರಯತ್ನ ಮಾಡಬೇಕು. ಪರಿಹಾರ ಕಾಣದ ಸಮಸ್ಯೆಗಳನ್ನು ನನ್ನ ಗಮನಕ್ಕೆ ತಂದಲ್ಲಿ ಶೀಘ್ರ ಬಗೆಹರಿಸಲು ಕ್ರಮ ವಹಿಸಲಾಗುವುದು ಎಂದು ಜಿಲ್ಲಾಧಿಕಾರಿ ಎಸ್. ಅಶ್ವತಿ ತಿಳಿಸಿದರು.
ತಾಲೂಕಿನ ಗಂಟಗೌಡನಹಳ್ಳಿಯಲ್ಲಿ ಕಂದಾಯ ಇಲಾಖೆ, ತಾಲ್ಲೂಕು ಆಡಳಿತವತಿಯಿಂದ ನಡೆದ ಜಿಲ್ಲಾಧಿಕಾರಿಗಳ ನಡೆ-ಹಳ್ಳಿಯ ಕಡೆ’ ಜಿಲ್ಲಾಧಿಕಾರಿಗಳ ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕೋವಿಡ್ ಸದ್ಯದ ಪರಿಸ್ಥಿತಿಯಲ್ಲಿ ನಿಯಂತ್ರಣದಲ್ಲಿದ್ದು ಗ್ರಾಮ ವಾಸ್ತವ್ಯವನ್ನು ಪುನರ್ ಆರಂಭಿಸಿ, ಜನರಿಗೆ ಎಲ್ಲಾ ರೀತಿಯ ಅನುಕೂಲವಾಗುವಂತೆ ಕ್ರಮವಹಿಸುವಂತೆ ಕಂದಾಯ ಸಚಿವ ಆರ್. ಅಶೋಕ್ ಅವರು ಸೂಚನೆ ನೀಡಿದ್ದು, ಅದರಂತೆ ಕಾರ‌್ಯಕ್ರಮ ಯಶಸ್ವಿಯಾಗಿ ಮಾಡುತ್ತಿದ್ದೇವೆ ಎಂದು ಹೇಳಿದರು.
ಗಂಟಗೌಡನಹಳ್ಳಿಗೆ ಭೇಟಿ ನೀಡಿ, ಗ್ರಾಮಸ್ಥರ ಮೂಲಭೂತ ಸಮಸ್ಯೆಗಳನ್ನು ಆಲಿಸಿ ಪರಿಹರಿಸಿದ್ದೇವೆ. ಗ್ರಾಮದ ಯುವಕರ, ಮಹಿಳೆಯರ, ವಿದ್ಯಾರ್ಥಿಗಳ ಜೊತೆ ಸಂವಾದ ನಡೆಸಿ ಅವರ ಸಮಸ್ಯೆಗಳಿಗೆ ಸ್ಪಂದಿಸಿದ್ದೇವೆ ಎಂದರು.
ಗ್ರಾಮದ ಜನರ, ವಿಧವಾವೇತನ, ವೃದ್ಧಾಪ್ಯವೇತನ, ಆರೋಗ್ಯ ಕಾರ್ಡ್, ಆರ್.ಟಿ.ಸಿ, ಪೌತಿಖಾತೆ ಸಮಸ್ಯೆಗಳಿಗೆ ಸ್ಪಂದಿಸಿ ಪ್ರಮಾಣಪತ್ರವನ್ನು ನೀಡಿದ್ದೇವೆ ಎಂದರು.
ಸರ್ಕಾರದ ಯೋಜನೆಗಳು, ವಿವಿಧ ಇಲಾಖೆಯ ಸೌಲಭ್ಯಗಳ ಬಗ್ಗೆ ಮಾಹಿತಿ ಒದಗಿಸಿದ್ದೇವೆ ಹಾಗೂ ಗ್ರಾಮದಲ್ಲಿ ಸ್ವಚ್ವತಾ ಕಾರ್ಯವನ್ನು ಕೈಗೊಂಡು, ಶುಚಿತ್ವ, ನೈರ್ಮಲ್ಯದ ಬಗ್ಗೆ ಅರಿವು ಮೂಡಿಸಿದ್ದೇವೆ ಎಂದು ಹೇಳಿದರು.
ಇದೇ ವೇಳೆ ಗ್ರಾಮದ ಅರ್ಹ ಲಾನುಭವಿಗಳಿಗೆ ಪಿಂಚಣಿ ಮಂಜೂರಾತಿ ಆದೇಶ ಪ್ರಮಾಣಪತ್ರ ನೀಡಲಾಯಿತು. ರಸ್ತೆ, ಸಾರಿಗೆ ಸಮಸ್ಯೆಯನ್ನು ಆಲಿಸಿ, ಅಧಿಕಾರಿಗಳಿಗೆ ಸೂಚಿಸಿ ಸೂಕ್ತ ವ್ಯವಸ್ಥೆಗೆ ಕ್ರಮವಹಿಸಲಾಯಿತು.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss