ವಿಶ್ವಕಪ್ ನಲ್ಲಿ ಹಾಲಿ ಚಾಂಪಿಯನ್ ಇಂಗ್ಲೆಂಡ್ ಸಿಕ್ಕಿತು ಮತ್ತೆ ಬಲ: ಟೀಮ್ ಗೆ ಬೆನ್ ಸ್ಟೋಕ್ಸ್ ಎಂಟ್ರಿ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

2023ರ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಗೆ ವೇದಿಕೆ ಸಜ್ಜಾಗಿದ್ದು, ಟೀಮ್ ಗಳು ಸಿದ್ಧತೆ ನಡೆಸುತ್ತಿದೆ.ಅದ್ರಲ್ಲೂ ಹಾಲಿ ಚಾಂಪಿಯನ್ ಇಂಗ್ಲೆಂಡ್, ಮತ್ತೊಮ್ಮೆ ಶತಾಯಗತಾಯ ಏಕದಿನ ವಿಶ್ವಕಪ್ ಗೆಲ್ಲಲು ರಣತಂತ್ರ ಹೆಣೆದಿದೆ.

ಇದಕ್ಕಾಗಿ ವಿಶ್ವಕಪ್‌ ಚಾಂಪಿಯನ್ ಆಲ್ರೌಂಡರ್ ನಿವೃತ್ತಿ ವಾಪಾಸ್ ಪಡೆಯಲು ಮನವೊಲಿಸುವಲ್ಲಿ ಯಶಸ್ವಿಯಾಗಿದೆ.ಏಕದಿನ ಕ್ರಿಕೆಟ್‌ನಿಂದ ನಿವೃತ್ತಿ ಪಡೆದಿದ್ದ ಚಾಂಪಿಯನ್ ಆಟಗಾರ ಬೆನ್ ಸ್ಟೋಕ್ಸ್ ಅವರ ಮನವೊಲಿಸಿ ನಿವೃತ್ತಿ ವಾಪಾಸ್ ಪಡೆಯುವಂತೆ ಮಾಡುವಲ್ಲಿ ಸಫಲವಾಗಿದೆ.

ಮುಂಬರುವ ಸೆಪ್ಟೆಂಬರ್‌ನಲ್ಲಿ ನ್ಯೂಜಿಲೆಂಡ್ ಎದುರಿನ 4 ಪಂದ್ಯಗಳ ಏಕದಿನ ಸರಣಿಗೆ ಇಂಗ್ಲೆಂಡ್ ಕ್ರಿಕೆಟ್ ತಂಡ ಪ್ರಕಟವಾಗಿದ್ದು, ಸ್ಟಾರ್ ಆಲ್ರೌಂಡರ್ ಬೆನ್ ಸ್ಟೋಕ್ಸ್‌ಗೆ ಮಣೆಹಾಕಲಾಗಿದೆ. ಈ ಮೂಲಕ ಮತ್ತೆ ಟೀಮ್ ಗೆ ಎಂಟ್ರಿ ಪಡೆದಿದ್ದಾರೆ .

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here