ಹೊಸದಿಗಂತ ಡಿಜಿಟಲ್ ಡೆಸ್ಕ್:
ಛತ್ತೀಸ್‌ಗಢದ ರಾಯ್‌ಪುರದಲ್ಲಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ ಕಾನ್ಸ್‌ಟೇಬಲ್‌ನನ್ನು ಪೊಲೀಸರು ಬಂಧಿಸಿದ್ದಾರೆ.
ಗುರುವಾರ ಮಧ್ಯರಾತ್ರಿ ಆರೋಪಿ ತನ್ನ ಕಾರು ಮತ್ತು ಮನೆಯಲ್ಲಿ ತನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಯುವತಿ ಆರೋಪಿಸಿದ್ದಾಳೆ. ಪೊಲೀಸರ ಪ್ರಕಾರ, ಯುವತಿ ಮತ್ತು ಆರೋಪಿ ಹಲವು ತಿಂಗಳಿನಿಂದ ಪರಸ್ಪರ ಪರಿಚಿತರು ಎನ್ನಲಾಗಿದೆ.
ಸಂತ್ರಸ್ತೆ ಕಾನ್ಸ್‌ಟೇಬಲ್ ನನ್ನು ಸಂಪರ್ಕಿಸಿ ತನ್ನ ಅಧ್ಯಯನಕ್ಕೆ ಸಹಾಯ ಮಾಡುವಂತೆ ಕೇಳಿಕೊಂಡಿದ್ದಾಳೆ. ಈ ವೇಳೆ ಆತ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ದೂರಿನಲ್ಲಿ ಹೇಳಲಾಗಿದೆ. ಅವರು ಎರಡು ಮೂರು ತಿಂಗಳ ಕಾಲ ದೂರವಾಣಿ ಸಂಪರ್ಕ ಹೊಂದಿದ್ದರು. ಇಬ್ಬರೂ ಒಂದೇ ಪ್ರದೇಶದವರು ಎಂದು ಪೊಲೀಸರು ತಿಳಿಸಿದ್ದಾರೆ.
ಈ ಸಂಬಂಧ 22 ವರ್ಷದ ಯುವತಿ ರಾಯ್‌ಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದೂರಿನ ಆಧಾರದ ಮೇಲೆ ಆರೋಪಿಯನ್ನು ಪೊಲೀಸರು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದರು. ಬಳಿಕ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.