Friday, July 1, 2022

Latest Posts

ಮುಂಬರುವ ಚುನಾವಣೆಗಳ ದೃಷ್ಟಿಯಿಂದ ರಾಜ್ಯಮಟ್ಟದ ಸಮಾವೇಶ: ಕ್ಯಾ.ಗಣೇಶ್ ಕಾರ್ಣಿಕ್

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..

ಹೊಸ ದಿಗಂತ ವರದಿ, ಚಿತ್ರದುರ್ಗ:

ಮುಂಬರುವ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಚುನಾವಣೆ, ತಾ.ಪಂ., ಜಿ.ಪಂ. ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಬೆಂಬಲಿತ ಗ್ರಾ.ಪಂ. ಅಧ್ಯಕ್ಷ, ಉಪಾಧ್ಯಕ್ಷರ ರಾಜ್ಯ ಮಟ್ಟದ ಸಮಾವೇಶ ನಡೆಸಲಾಗುವುದು ಎಂದು ಬಿಜೆಪಿ ರಾಜ್ಯ ವಕ್ತಾರ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಹೇಳಿದರು.
ನಗರದಲ್ಲಿ ಶನಿವಾರ ನಡೆದ ರಾಜ್ಯ ಪದಾಧಿಕಾರಿಗಳ ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಕ್ಷದ ಸಂಘಟನೆ ದೃಷ್ಠಿಯಿಂದ ಪ್ರತಿ ತಿಂಗಳು ರಾಜ್ಯ ಪದಾಧಿಕಾರಿಗಳ ಸಭೆ ನಡೆಸಲಾಗುವುದು. ಅದರಂತೆ ಇಂದು ಚಿತ್ರದುರ್ಗದಲ್ಲಿ ನಡೆಸಲಾಗಿದೆ. ಒಟ್ಟು 38 ಜನರಲ್ಲಿ 33 ಜನ ಪದಾಧಿಕಾರಿಗಳು ಹಾಜರಾಗಿದ್ದಾರೆ. ಉಳಿದ ಐದು ಜನ ಗೈರಾಗಿದ್ದು, ಅವರು ರಾಜ್ಯಾಧ್ಯರು ಹಾಗೂ ಸಂಘಟನಾ ಕಾರ್ಯದರ್ಶಿ ಅನುಮತಿ ಪಡೆದಿದ್ದಾರೆ ಎಂದರು.
ಪಕ್ಷ ಸಂಘಟನೆಗಾಗಿ ಹಿಂದೆ ಮಾಡಿದ ಹಾಗೂ ಮುಂದೆ ಮಾಡಬೇಕಾದ ಕಾರ್ಯ ಚಟುವಟಿಕೆಗಳ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ. ಮುಂದಿನ ಚುನಾವಣೆಗಳ ದೃಷ್ಠಿಯಿಂದ ಅಗತ್ಯ ಕ್ರಮಗಳನ್ನು ಕೈಗೊಳ್ಳುವ ಕುರಿತು ತೀರ್ಮಾನ ಮಾಡಲಾಗಿದೆ. ಈ ನಿಟ್ಟಿನಲ್ಲಿ ಗ್ರಾ.ಪಂ. ಸದಸ್ಯರ ಜಿಲ್ಲಾ ಮಟ್ಟದ ಸಮಾವೇಶಗಳನ್ನು ನಡೆಸಲಾಗುವುದು. ಆ ಮೂಲಕ ಪಕ್ಷ ಸಂಘಟನೆ ಬಲಗೊಳಿಸಲಾಗುವುದು ಎಂದು ಹೇಳಿದರು.
ಗುರು ವಂದನೆ ಕಾರ್ಯಕ್ರಮದ ಅಂಗವಾಗಿ ಬಿಜೆಪಿ ಕಾರ್ಯಕರ್ತರು ವ್ಯಾಪಕವಾಗಿ ಆಚರಿಸಬೇಕು. ಸಮಾಜದ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದವರನ್ನು ಗುರುತಿಸಿ ಅವರನ್ನು ಗುರು ಸ್ಥಾನದಲ್ಲಿಟ್ಟು ಸನ್ಮಾನಿಸಬೇಕು. ಕೊರೋನಾ ಮೂರನೇ ಅಲೆ ಸಮರ್ಪಕವಾಗಿ ಎದುರಿಸಲು ಕಾರ್ಯಕರ್ತರು ಲಸಿಕಾ ಅಭಿಯಾನದಲ್ಲಿ ತೊಡಗಿಸಿಕೊಳ್ಳಬೇಕು. ಎಲ್ಲರಿಗೂ ತಪ್ಪದೇ ಲಸಿಕೆ ಹಾಕಿಸಬೇಕು. ಸೇವಾ ಇ ಸಂಘಟನೆ ಹೆಸರಿನಲ್ಲಿ ಸೇವೆ ಮಾಡುವವರನ್ನು ಗುರುತಿಸಿ ಕೋವಿಡ್ ಕೆಲಸಕ್ಕೆ ತರಬೇತಿ ನೀಡಲಾಗುವುದು ಎಂದರು.
ಕೋವಿಡ್ ಕಾರಣದಿಂದ ಕಳೆದ ಕೆಲವು ದಿನಗಳಿಂದ ಸಭೆಗಳನ್ನು ನಡೆಸಲು ಆಗಿಲ್ಲ. ಹಾಗಾಗಿ ಮುಂದಿನ ದಿನಗಳಲ್ಲಿ ಮಂಡಲ, ಜಿಲ್ಲಾ ಮಟ್ಟದ ಕಾರ್ಯಕ್ರಮಗಳನ್ನು ನಡೆಸಲಾಗುವುದು. ಬೂತ್ ಮಟ್ಟದ ಅಧ್ಯಕ್ಷರನ್ನು ಗುರುತಿಸುವ ನಿಟ್ಟಿನಲ್ಲಿ ಅವರ ಮನೆಗಳಿಗೆ ನಾಮಫಲಕ ಅಳವಡಿಸುವ ಕಾರ್ಯಕ್ರಮ ಮಾಡಲಾಗುವುದು. ಪ್ರಧಾನಿ ಅವರ ಮನ್ ಕಿ ಬಾತ್ ಸಂದೇಶವನ್ನು ಎಲ್ಲ ಜನರಿಗೆ ತಲುಪಿಸುವ ಉದ್ದೇಶದಿಂದ ಬೂತ್ ಮಟ್ಟದಲ್ಲಿ ಅಲ್ಲಿನ ಅಧ್ಯಕ್ಷರು ಸಭೆಯನ್ನು ಆಯೋಜಿಸುವ ಕೆಲಸ ಮಾಡಲಿದ್ದಾರೆ ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಮುರುಳಿ, ತೇಜಸ್ವಿನಿಗೌಡ, ಅವಿನಾಶ್, ದಗ್ಗೆ ಶಿವಪ್ರಕಾಶ್, ನಾಗರಾಜ್ ಬೇದ್ರೆ, ಹೊಳಲ್ಕೆರೆಯ ಬಿ.ಜಿ.ಗಿರೀಶ್‌ಕುಮಾರ್ ಹಾಜರಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss