ದಿಗಂತ ವರದಿ ವಿಜಯಪುರ:
ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ಖಂಡಿಸಿ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ನೇತೃತ್ವದಲ್ಲಿ ನಗರದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಯಿತು.
ಪ್ರತಿಭಟನಾಕಾರರು, ನಗರದ ಸಿದ್ಧೇಶ್ವರ ದೇವಸ್ಥಾನದಿಂದ ಮೆರವಣಿಗೆ ಹೊರಟು, ಗಾಂಧಿ ವೃತ್ತ, ಬಸವೇಶ್ವರ ವೃತ್ತ, ಡಾ.ಬಿ.ಆರ್. ಅಂಬೇಡ್ಕರ್ ವೃತ್ತದ ಮೂಲಕ ಜಿಲ್ಲಾಧಿಕಾರಿ ಕಚೇರಿಯವರಿಗೆ ತೆರಳಿ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರಿಗೆ ಮನವಿ ಸಲ್ಲಿಸಿದರು.
ಪ್ರತಿಭಟನೆಯುದ್ದಕ್ಕೂ ಗೋ ಬ್ಯಾಕ್ ರಾಜ್ಯಪಾಲರು ಅನ್ನೋ ಘೋಷಣೆ ಮೊಳಗಿತು, ಅಲ್ಲದೆ ಸಿದ್ದರಾಮಯ್ಯ ಅಭಿಮಾನಿಗಳು ಟಗರಿನೊಂದಿಗೆ ಆಗಮಿಸಿದರು.
ಈ ಸಂದರ್ಭ ಶಾಸಕರಾದ ಯಶವಂತರಾಯಗೌಡ ಪಾಟೀಲ, ಅಪ್ಪಾಜಿ ನಾಡಗೌಡ, ಅಶೋಕ ಮನಗೂಳಿ, ಎಂಎಲ್ ಸಿ ಸುನೀಲಗೌಡ ಪಾಟೀಲ, ಮುಖಂಡರಾದ ಅಬ್ದುಲ್ ಹಮೀದ್ ಮುಶ್ರೀಫ್, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಲೋಣಿ ಇತರರು ಇದ್ದರು.