CRIME NEWS: ವಿಜಯಪುರದಲ್ಲಿ ಯುವತಿ ಮೇಲೆ ಅತ್ಯಾಚಾರ

ಹೊಸ ದಿಗಂತ ವರದಿ, ವಿಜಯಪುರ:

ನಗರದ ಸ್ಯಾಟಲೈಟ್ ಬಸ್ ನಿಲ್ದಾಣ ಬಳಿಯ ನಿರ್ಜನ ಪ್ರದೇಶದಲ್ಲಿ 22 ವರ್ಷದ ಯುವತಿ ಮೇಲೆ ಅತ್ಯಾಚಾರ ನಡೆಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ನಿಂತಿದ್ದ ಯುವತಿಯನ್ನು ಪುಸಲಾಯಿಸಿ, ಮೂವರು ಕರೆದುಕೊಂಡು ಹೋಗಿದ್ದಾರೆ. ಅನಂತರ ಮೂವರಲ್ಲಿ ಓರ್ವ ಯುವತಿಯ ಮೇಲೆ ಅತ್ಯಾಚಾರ ನಡೆಸಿದ್ದಾನೆ‌. ಅಲ್ಲದೆ ಇನ್ನಿಬ್ಬರು ಅತ್ಯಾಚಾರಕ್ಕೆ ಸಹಕಾರ ನೀಡಿದ್ದಾರೆ ಎಂದು ಪ್ರಕರಣದಲ್ಲಿ ತಿಳಿಸಲಾಗಿದೆ.

ಯುವತಿಗೆ ಚಿಕಿತ್ಸೆ ನೀಡಲಾಗಿದೆ. ಮೂವರ ಆರೋಪಿಗಳ ಬಂಧನಕ್ಕಾಗಿ ಪೊಲೀಸರು ಬಲೆ ಬೀಸಿದ್ದಾರೆ.

ವಿಜಯಪುರ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!