ಹೊಸದಿಗಂತ ವರದಿ ಹುಬ್ಬಳ್ಳಿ:
ಇಲ್ಲಿನ ವಿದ್ಯಾನಗರದ ಕೆ.ಎಲ್.ಇ ಶಿಕ್ಷಣ ಮಹಾವಿದ್ಯಾಲಯ ಹಳೆ ವಿದ್ಯಾರ್ಥಿ ಸಂಘದ ಉದ್ಘಾಟನಾ ಕಾರ್ಯಕ್ರಮವನ್ನು ಅ. 22 ರಂದು ಬೆಳಿಗ್ಗೆ 11ಗಂಟೆಗೆ ವಿದ್ಯಾನಗರದ ಉಣಕಲ್ ಕ್ರಾಸ್ ಕೆಎಲ್ಇ ಸಂಸ್ಥೆ ಶಿಕ್ಷಣ ಮಹಾವಿದ್ಯಾಲಯದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಅಧ್ಯಕ್ಷ ಲಿಂಗರಾಜ ಮುಳ್ಳಳ್ಳಿ ಹೇಳಿದರು.
ನಗರದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ ಸಂಘದಲ್ಲಿ 13 ಜನರು ನೋಂದಣಿ ಮಾಡಿಸಿದ್ದಾರೆ. ಸಾವಿರಕ್ಕೂ ಹೆಚ್ಚು ಸದಸ್ಯರಿದ್ದಾರೆ. ಸಂಘದ ಮುಖ್ಯ ಉದ್ದೇಶ ಸಮಾಜದಲ್ಲಿ ಬಡ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಸಹಾಯಕವಾಗುವ ಕಾರ್ಯಕ್ರಮ ಹಮ್ಮಿಕೊಳ್ಳುವುದು ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡುವುದಾಗಿದೆ. ಅಷ್ಟೇ ಅಲ್ಲದೆ ಉಚಿತ ಆರೋಗ್ಯ ತಪಾಸಣೆ, ರಕ್ತ ತಪಸಣೆ, ರಕ್ತದಾನ ಶಿಬಿರ, ವಿಶೇಷ ತಜ್ಞರ ಸೇವೆ ನೀಡಲಾಗುತ್ತದೆ. ಸಮಾಜದಲ್ಲಿ ಅಬಲಾಶ್ರಮ, ಮಹಿಳಾಶ್ರಮ, ಅನಾಥಾಶ್ರಮ, ವೃದ್ಧಾಶ್ರಮ ಸ್ಥಾಪಿಸುವುದಾಗಿದೆ ಎಂದು ತಿಳಿಸಿದರು.
ಸಮಾರಂಭಕ್ಕೆ ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಆಗಮಿಸಲಿದ್ದು ಅಧ್ಯಕ್ಷತೆಯನ್ನು ಕೆಎಲ್ಇ ಸಂಸ್ಥೆಯ ನಿರ್ದೇಶಕ ಜಯಾನಂದ ಮುನವಳ್ಳಿ ವಹಿಸಿಕೊಳ್ಳಲಿದ್ದಾರೆ. ಸಂಘದ ಅಧ್ಯಕ್ಷ ಲಿಂಗರಾಜ ಮುಳ್ಳಳ್ಳಿ ಭಾಗವಹಿಸುವರು ಎಂದು ಹೇಳಿದರು.
ಸುದ್ದಿಗೋಷ್ಟಿಯಲ್ಲಿ ಸಂಘದ ಕಾರ್ಯಾದರ್ಶಿ ಶ್ಯಾಮ ಮಲ್ಲನಗೌಡ, ಕೋಶಾಧ್ಯಕ್ಷ ಬಿ.ವಿ. ಹಳೇಮನಿ, ಮಹಾದೇವ ಮಾನೆ, ಬಸವರಾಜ ಹಳೇಮನಿ ಇದ್ದರು.