ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರು: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ವಸತಿ ಶಿಕ್ಷಣ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮೆಟ್ರಿಕ್ ನಂತರದ ವಿದ್ಯಾರ್ಥಿನಿಯರಿಗೆ ಓಬವ್ವ ಆತ್ಮ ರಕ್ಷಣಾ ಕಲೆ ಕಲಿಸುವ ಯೋಜನೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಫೆ. 6ರಂದು ಬೆಳಗ್ಗೆ 10 ಗಂಟೆಗೆ ಉದ್ಘಾಟನೆ ಮಾಡಲಿದ್ದಾರೆ.
ವಿಧಾನ ಸೌಧ ಮುಂಭಾಗದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಓಬವ್ವ ಆತ್ಮರಕ್ಷಣಾ ಕಲೆಯ ಲಾಂಛನವನ್ನು ಅನಾವರಣಗೊಳಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣ ಮತ್ತು ಹಿಂ.ವ. ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹಾಜರಿರಲಿದ್ದಾರೆ. ಈ ಕಾರ್ಯಕ್ರಮವು ಫೆ. 7ರಂದು ನಿಗದಿಯಾಗಿತ್ತು.
ಪೂರ್ವನಿಗದಿಯಂತೆ ಜಿಲ್ಲಾ ಮಟ್ಟದಲ್ಲಿ ಜಿಲ್ಲಾ ಕೇಂದ್ರಗಳಲ್ಲಿ ಫೆ. 7ರಂದು 10 ಗಂಟೆಗೆ ಕಾರ್ಯಕ್ರಮ ಜರಗಲಿದೆ ಎಂದೂ ಇಲಾಖಾ ಪ್ರಕಟಣೆ ತಿಳಿಸಿದೆ.