Friday, August 12, 2022

Latest Posts

ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ 40 ಲಕ್ಷ‌ ರೂ.ವೆಚ್ಚದ ಜಿಮ್ ಉದ್ಘಾಟನೆ

ಹೊಸದಿಗಂತ ವರದಿ,ಮಡಿಕೇರಿ:

ಇಲ್ಲಿನ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಕಿಮ್ಸ್)ಯಲ್ಲಿ ಸುಮಾರು 40 ಲಕ್ಷ ರೂ. ವೆಚ್ಚದಲ್ಲಿ ಅನುಷ್ಠಾನಗೊಳಿಸಲಾಗಿರುವ ಉನ್ನತ ದರ್ಜೆಯ ವ್ಯಾಯಾಮ ಉಪಕರಣ(ಜಿಮ್)ಗಳನ್ನು ಶಾಸಕ ಎಂ.ಪಿ.ಅಪ್ಪಚ್ಚುರಂಜನ್ ಶುಕ್ರವಾರ ಉದ್ಘಾಟಿಸಿದರು.
ಈ ಸಂದರ್ಭ ಮಾತನಾಡಿದ ಅವರು ಉದ್ಘಾಟಿಸಲಾಗಿರುವ ಜಿಮ್‍ನ್ನು ಸಂಸ್ಥೆಯಲ್ಲಿ ವ್ಯಾಸಂಗ ಮಾಡುತ್ತಿರುವ ಹಾಗೂ ಕರ್ತವ್ಯ ನಿರ್ವಹಿಸುತ್ತಿರುವ ಎಲ್ಲರೂ ಪರಿಣಾಮಕಾರಿಯಾಗಿ ಬಳಸಿಕೊಂಡು ಆರೋಗ್ಯ ಕಾಪಾಡಿಕೊಳ್ಳುವಂತೆ ಕರೆ ನೀಡಿದರು.
ಕಳೆದ 5 ವರ್ಷಗಳಿಂದ ಸ್ವತಃ ಯೋಗ ಮತ್ತು ಪ್ರತಿದಿನ ಅರ್ಧ ಗಂಟೆ ಜಿಮ್ ಮಾಡುತ್ತಿರುವುದಾಗಿ ತಿಳಿಸಿದ ಅವರು, ಹಾಜರಿದ್ದ ಎಲ್ಲರೂ ದಿನವಹಿ ಅಭ್ಯಾಸ ಮಾಡಲು ತಿಳಿಸುವುದರೊಂದಿಗೆ ಪ್ರೇರೇಪಣೆಯ ಮಾತುಗಳನ್ನಾಡಿದರು.
ಕಾರ್ಯಕ್ರಮದಲ್ಲಿ ಸಂಸ್ಥೆಯ ಡೀನ್ ಹಾಗೂ ನಿರ್ದೇಶಕ ಡಾ. ಕೆ.ಬಿ.ಕಾರ್ಯಪ್ಪ, ಮುಖ್ಯ ಆಡಳಿತಾಧಿಕಾರಿ ಡಾ. ನಂಜುಂಡೇಗೌಡ, ಪ್ರಾಂಶುಪಾಲ ಡಾ ವಿಶಾಲ್ ಕುಮಾರ್, ವೈದ್ಯಕೀಯ ಅಧೀಕ್ಷಕ ಡಾ.ಎಸ್.‌ಮಂಜುನಾಥ್, ಸಂಸ್ಥೆಯ ಬೋಧಕ, ಬೋಧಕೇತರ ಸಿಬ್ಬಂದಿಗಳು ಮತ್ತು ವೈದ್ಯಕೀಯ ವಿದ್ಯಾರ್ಥಿಗಳು ಹಾಜರಿದ್ದರು.
ಈ ಜಿಮ್‌ ಸಂಸ್ಥೆಯ ವೈದ್ಯಕೀಯ ಮತ್ತು ಅರೆ ವೈದ್ಯಕೀಯ ಹಾಗೂ ಶುಶ್ರೂಷಕ ವಿದ್ಯಾರ್ಥಿಗಳು, ಬೋಧಕ ಬೋಧಕೇತರ ಸಿಬ್ಬಂದಿ ವರ್ಗದವರು ಹಾಗೂ ಸಂಸ್ಥೆಯಲ್ಲಿ ಕರ್ತವ್ಯ ನಿರ್ವಹಿಸುವ ಎಲ್ಲಾ ಸಿಬ್ಬಂದಿ ವರ್ಗದವರು ಬಳಸಬಹುದಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss