ಹೊಸದಿಗಂತ ವರದಿ ಧಾರವಾಡ:
ಭಾರತೀಯ ತಂತ್ರಜ್ಞಾನ ಸಂಸ್ಥೆ(ಐಐಟಿ) ಧಾರವಾಡದ ಸಂಪನ್ಮೂಲ ಮತ್ತು ದತ್ತಾಂಶ ಕೇಂದ್ರ(ಕೆಆರ್‌ಡಿಸಿ), ಸೆಂಟ್ರಲ್ ಲರ್ನಿಂಗ್ ಥಿಯೇಟರ್ (ಸಿಎಲ್‌ಟಿ), ಎರಡು ಹೊಸ ಪ್ರವೇಶ ದ್ವಾರಗಳನ್ನು ಶುಕ್ರವಾರ ಭಾರತದ ಉಪರಾಷ್ಟ್ರಪತಿ ಜಗದೀಪ ದನ್ಕರ್ ಲೋಕಾರ್ಪಣೆಗೊಳಿಸಿದರು.
ರಾಜ್ಯಪಾಲ ಥಾವರಚಂದ್ ಗೆಹಲೋತ್, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಐಐಟಿ ನಿರ್ದೇಶಕ ವೆಂಕಪ್ಪಯ್ಯ ದೇಸಾಯಿ ಹಾಗೂ ಅಧ್ಯಾಪಕ ವೃಂದ ಹಾಗೂ ಸಿಬ್ಬಂದಿ ಇದ್ದರು.