ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..
ಹೊಸದಿಗಂತ ಆನ್ ಲೈನ್ ಡೆಸ್ಕ್:
ರಾಜಸ್ತಾನದ ಬರ್ಮಾರ್ ನ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರತೀಯ ವಾಯುಪಡೆಗಾಗಿ ನಿರ್ಮಿಸಲಾಗಿರುವ ತುರ್ತು ಭೂಸ್ಪರ್ಶ ನೆಲೆ(ಇಎಲ್ಎಫ್)ಯನ್ನು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವ ನಿತಿನ್ ಗಡ್ಕರಿ ಉದ್ಘಾಟಿಸಿದರು.
ಭಾರತೀಯ ವಾಯುಪಡೆಯ ಮುಕುಟ ಎಂದೇ ಕರೆಯಿಸಿಕೊಳ್ಳುವ ಸುಖೋಯ್ Su-30 MKI ಫೈಟರ್ ಜೆಟ್ ದೇಶದ ರಾಷ್ಟ್ರೀಯ ಹೆದ್ದಾರಿಯಲ್ಲಿ ಇದೇ ಮೊದಲ ಬಾರಿಗೆ ಭೂಸ್ಪರ್ಶ ಕಂಡಿದೆ.
ಸುಖೋಯ್ ಫೈಟರ್ ಜೆಟ್ ಮಾತ್ರವಲ್ಲದೇ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹಾಗೂ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಇದ್ದ ಭಾರತೀಯ ವಾಯುಪಡೆಯ ಸಿ 130 ಜೆ ಸೂಪರ್ ಹರ್ಕ್ಯೂಲಸ್ ವಿಮಾನವು ಜಾಲೋರ್ ರಾಷ್ಟ್ರೀಯ ಹೆದ್ದಾರಿಯಲ್ಲಿ ತುರ್ತು ಭೂ ಸ್ಪರ್ಶ ಕಂಡಿದೆ.
ಸುಖೋಯ್ -30 ಎಂಕೆಐ ಫೈಟರ್ನಿಂದ ಆರಂಭಿಸಿ ಅನೇಕ ಲ್ಯಾಂಡಿಂಗ್ ಮತ್ತು ಟಚ್ಡೌನ್ ಕಾರ್ಯಾಚರಣೆಗಳನ್ನು ನಡೆಸಲಾಯಿತು. ಎಎನ್-32 ಮಿಲಿಟರಿ ಸಾರಿಗೆ ವಿಮಾನ ಮತ್ತು ಐಎಎಫ್ ನ ಎಂಐ-17v5 ಹೆಲಿಕಾಪ್ಟರ್ ಸಹ ಇಎಲ್ಎಫ್ ನಲ್ಲಿ ಇಳಿಯಿತು. ಇದು ಸಹಾಯಕ ಮಿಲಿಟರಿ ವಾಯುನೆಲೆಯಾಗಿ ಕಾರ್ಯನಿರ್ವಹಿಸಲು ತನ್ನ ಸಂಪೂರ್ಣ ಕಾರ್ಯಾಚರಣೆಯ ಸಿದ್ಧತೆಯನ್ನು ತೋರಿಸುತ್ತದೆ.
#WATCH | For the first time, a Sukhoi Su-30 MKI fighter aircraft lands at the national highway in Jalore, Rajasthan pic.twitter.com/BVVOtCpT0H
— ANI (@ANI) September 9, 2021