ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಾಧು ಸಂತರೊಂದಿಗೆ ಸೇರಿಕೊಂಡು ಕ್ರಾಂತಿವೀರ ಬ್ರಿಗೇಡ್ ಶುರು ಮಾಡಿದ್ದೇವೆ ಎಂದು ಮಾಜಿ ಡಿಸಿಎಂ ಕೆ.ಎಸ್ ಈಶ್ವರಪ್ಪ ಹೇಳಿದ್ದಾರೆ.
ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಫೆ.4 ರಂದು ಬಸವನ ಬಾಗೇವಾಡಿಯಲ್ಲಿ ಕ್ರಾಂತಿವೀರ ಬ್ರಿಗೇಡ್ ಉದ್ಘಾಟನೆ ಆಗಲಿದೆ. ಇದು ಜಾತ್ಯಾತೀತವಾಗಿ ಮತ್ತು ಪಕ್ಷಾತೀತವಾ ಕಾರ್ಯಕ್ರಮ ನಡೆಯಲಿದೆ ಎಂದರು.
1008 ಮಠಾಧೀಶರ ಪಾದಪೂಜೆಯೊಂದಿಗೆ ಉದ್ಘಾಟನೆ ಆಗಲಿದೆ. ಹಿಂದೂ ಧರ್ಮದ ಒಳಿತಿಗಾಗಿ ಕ್ರಾಂತಿವೀರ ಬ್ರಿಗೇಡ್ ಕೆಲಸ ಮಾಡಲಿದೆ ಎಂದು ಭರವಸೆ ನೀಡಿದರು.