ಹೊಸದಿಗಂತ ಡಿಜಿಟಲ್ ಡೆಸ್ಕ್:
ದೆಹಲಿಯಲ್ಲಿ ಇಂದು ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್)ದ ನೂತನ ಕಚೇರಿ ‘ಕೇಶವ್ ಕುಂಜ್’ ಅನ್ನು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರು ಉದ್ಘಾಟಿಸಿದರು.
ಈ ವೇಳೆ ಮಾತನಾಡಿದ ಅವರು, ಆರ್‌ಎಸ್‌ಎಸ್ ಕೆಲಸವು ದೇಶಾದ್ಯಂತ ವೇಗವನ್ನು ಪಡೆಯುತ್ತಿದೆ ಮತ್ತು ದಿನದಿಂದ ದಿನಕ್ಕೆ ವಿಸ್ತರಿಸುತ್ತಿದೆ. ನಮ್ಮ ಕೆಲಸವು ಈ ಕಟ್ಟಡದಂತೆಯೇ ಭವ್ಯವಾಗಿರಬೇಕು. ನಮ್ಮ ಕೆಲಸವು ಆ ಭವ್ಯತೆಯನ್ನು ಪ್ರತಿಬಿಂಬಿಸಬೇಕು. ಈ ಕೆಲಸವು ಭಾರತವನ್ನು ಮತ್ತೆ ವಿಶ್ವಗುರುವಿನ ಸ್ಥಾನಕ್ಕೆ ಕೊಂಡೊಯ್ಯುತ್ತದೆ ಎಂಬ ನಂಬಿಕೆ ನಮಗಿದೆ. ಭಾರತ ಶೀಘ್ರದಲ್ಲೇ ವಿಶ್ವಗುರುವಾಗುತ್ತದೆ. ನಾವು ಇದನ್ನು ನಮ್ಮ ಜೀವಿತಾವಧಿಯಲ್ಲಿ ನೋಡುತ್ತೇವೆ ಎಂಬ ವಿಶ್ವಾಸ ನಮಗಿದೆ ಎಂದು ಹೇಳಿದರು.
ಶ್ರೀ ರಾಮ ಜನ್ಮಭೂಮಿ ನ್ಯಾಸ್ ಖಜಾಂಚಿ ಪೂಜ್ಯ ಗೋವಿಂದದೇವ್ ಗಿರಿ ಜೀ ಮಹಾರಾಜ್ ಅವರು ತಮ್ಮ ಆಶೀರ್ವಚನ ನೀಡಿದರು.
ಕೇಶವ ಕುಂಜ್ ಉದ್ಘಾಟನಾ ಸಮಾರಂಭದಲ್ಲಿ ಕೇಶವ ಸ್ಮಾರಕ ಸಮಿತಿಯ ಅಧ್ಯಕ್ಷ ಅಲೋಕ್ ಕುಮಾರ್, ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಮೊದಲಾದ ಗಣ್ಯರು ಉಪಸ್ಥಿತರಿದ್ದರು.