ಬೆಂಗಳೂರಿನಲ್ಲಿ ರೋಹನ್ ಕಾರ್ಪೋರೇಶನ್‌ನ ನೂತನ ಕಚೇರಿ ಉದ್ಘಾಟನೆ; ನವೆಂಬರ್ 6ರಿಂದ ಮೂರು ದಿನಗಳ ಪ್ರಾಜೆಕ್ಟ್ ಎಕ್ಸಿಬಿಷನ್

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಮಂಗಳೂರಿನ ಹೆಸರಾಂತ ರಿಯಲ್ ಎಸ್ಟೇಟ್ ಸಂಸ್ಥೆಯಾದ ರೋಹನ್ ಕಾರ್ಪೋರೇಶನ್‌, ಇದೀಗ ಬೆಂಗಳೂರಿನಲ್ಲಿ ತನ್ನ ನೂತನ ಕಚೇರಿಯನ್ನು ಉದ್ಘಾಟಿಸುವ ಮೂಲಕ ಕರ್ನಾಟಕದ ರಾಜಧಾನಿಯಲ್ಲಿ ತನ್ನ ಅಧಿಕೃತ ಉಪಸ್ಥಿತಿಗೆ ಚಾಲನೆ ನೀಡಿದೆ. ನಗರದ ಕನ್ನಿಂಗ್‌ಹ್ಯಾಮ್ ರಸ್ತೆಯಲ್ಲಿರುವ ಸಂಸ್ಥೆಯ ನೂತನ ಕಚೇರಿಯನ್ನು ಕರ್ನಾಟಕದ ಮುಖ್ಯಮಂತ್ರಿ ಡಿ. ಕೆ.ಶಿವಕುಮಾರ್ ಅವರು ಉದ್ಘಾಟಿಸಿದರು. ಇದರ ಅಂಗವಾಗಿ, ನವೆಂಬರ್ 6, 7 ಮತ್ತು 8ರಂದು ಮೂರು ದಿನಗಳ ಪ್ರಾಜೆಕ್ಟ್ ಎಕ್ಸಿಬಿಷನ್ ಅನ್ನು ಆಯೋಜಿಸಲಾಗಿದ್ದು, ಗ್ರಾಹಕರಿಗೆ ಆಯ್ದ ಯೋಜನೆಗಳನ್ನು ವಿಶೇಷ ದರಗಳಲ್ಲಿ ಖರೀದಿಸುವ ಅವಕಾಶವೂ ದೊರೆಯಲಿದೆ.  ಕನ್ನಿಂಗ್‌ಹ್ಯಾಮ್ ರಸ್ತೆ, ಸ್ಯಾಂಕಿ ರಸ್ತೆ ಕ್ರಾಸ್‌ನಲ್ಲಿರುವ ದಿ ಕನ್ನಿಂಗ್‌ಹ್ಯಾಮ್ ಕಮರ್ಷಿಯಲ್‌ನ ಮೊದಲ ಮಹಡಿಯಲ್ಲಿ ನೂತನ ಕಚೇರಿ ಕಾರ್ಯಾರಂಭ ಮಾಡಿದೆ. ಇದರೊಂದಿಗೆ ಸಿಲಿಕಾನ್ ಸಿಟಿಯಲ್ಲಿ ರೋಹನ್ ಕಾರ್ಪೋರೇಶನ್‌ ತನ್ನ ಕಾರ್ಯಚಟುವಟಿಕೆಗಳನ್ನು ವಿಸ್ತರಿಸಿದ್ದು, ಬೆಂಗಳೂರಿನ ಮನೆ ಖರೀದಿದಾರರು … Continue reading ಬೆಂಗಳೂರಿನಲ್ಲಿ ರೋಹನ್ ಕಾರ್ಪೋರೇಶನ್‌ನ ನೂತನ ಕಚೇರಿ ಉದ್ಘಾಟನೆ; ನವೆಂಬರ್ 6ರಿಂದ ಮೂರು ದಿನಗಳ ಪ್ರಾಜೆಕ್ಟ್ ಎಕ್ಸಿಬಿಷನ್